ಪರೀಕ್ಷೆ ಒತ್ತಡದಿಂದ ಪಿಎಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಪರೀಕ್ಷೆ ಒತ್ತಡದಿಂದ ಪಿಎಚ್.ಡಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೈಸೂರಿನ ಸರಸ್ವತಿಪುರಂನಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದ್ದು, ಮೃತನ್ನು ರಶ್ಮಿ(29) ಎಂದು ಗರುತಿಸಲಾಗಿದೆ. ರಶ್ಮಿ ರಸಾಯನ ಶಾಸ್ತ್ರ (ಕೆಮಿಸ್ಟ್ರಿ)ದಲ್ಲಿ ಎಂಎಸ್ಸಿ ಮುಗಿಸಿ ಪಿಎಚ್‌ಡಿ ಮಾಡುತ್ತಿದ್ದರು. ಸರಸ್ವತಿಪುರಂ 9ನೇ ಮುಖ್ಯ ರಸ್ತೆಯಲ್ಲಿರುವ ಪೇಯಿಂಗ್‌ ಗೆಸ್ಟ್‌ ಆಗಿ ಚಾಮರಾಜನಗರ ಮೂಲದ ರಶ್ಮಿ ಉಳಿದುಕೊಂಡಿದ್ದರು.
ಈ ಮಧ್ಯೆ ಜೆಎಸ್ ಎಸ್ ನಲ್ಲಿ ಪಾರ್ಟ್ ಟೈಂ ಲೆಕ್ಚರರ್ ಆಗಿಯೂ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement