ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ಲಕ್ನೋ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್​ ಪ್ರಜಾಪತಿ (Gayatri Prajapati) ಹಾಗೂ ಇತರ ಇಬ್ಬರು ಆರೋಪಿಗಳಿಗೆ ಲಕ್ನೋ ವಿಶೇಷ ಕೋರ್ಟ್‌ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಉತ್ತರಪ್ರದೇಶದ ಸಮಾಜವಾದಿ ಪಕ್ಷದ  ಮುಖಂಡ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (Life Sentence) ಹಾಗೂ ತಲಾ 2 ಲಕ್ಷ ರೂ. ದಂಡವನ್ನು ಕೋರ್ಟ್ ವಿಧಿಸಿದೆ.
ನಿನ್ನೆ (ಗುರುವಾರ) ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿದ್ದ ಕೋರ್ಟ್‌ ಇಂದು (ಶುಕ್ರವಾರ) ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಪ್ರಾಸಿಕ್ಯೂಷನ್ ಮೂವರ ವಿರುದ್ಧದ ಆರೋಪಗಳನ್ನು ಸಮಂಜಸವಾಗಿ ಸಾಬೀತುಪಡಿಸಿದೆ ಎಂದು ನಿನ್ನೆ ಹೇಳಿದ್ದರು.
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ಲಕ್ನೋದ ವಿಶೇಷ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಖಿಲೇಶ್ ಯಾದವ್ ಅವರ ಕ್ಯಾಬಿನೆಟ್‌ನಲ್ಲಿ ಸಾರಿಗೆ ಮತ್ತು ಗಣಿಗಾರಿಕೆ ಸಚಿವಾಲಯಗಳ ಖಾತೆಗಳನ್ನು ಹೊಂದಿದ್ದ ಪ್ರಜಾಪತಿಯನ್ನು ಮಾರ್ಚ್ 2017ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಮತ್ತು ಆಕೆಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.
ಅಕ್ಟೋಬರ್ 2014ರಿಂದ ಸಚಿವರು ಮತ್ತು ಅವರ ಸಹಚರರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದರು. ಆರೋಪಿಗಳು ಜುಲೈ 2016ರಲ್ಲಿ ತನ್ನ ಅಪ್ರಾಪ್ತ ಮಗಳಿಗೆ ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ ನಂತರ ಅವರ ವಿರುದ್ಧ ದೂರು ನೀಡಲು ನಿರ್ಧರಿಸಿದ್ದರು. ಗಾಯತ್ರಿ ಪ್ರಜಾಪತಿ ಜೊತೆಗೆ ಆಶಿಶ್ ಶುಕ್ಲಾ ಮತ್ತು ಅಶೋಕ್ ತಿವಾರಿ ಕೂಡ ಶಿಕ್ಷೆಗೆ ಗುರಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement