ಹುಬ್ಬಳ್ಳಿ: ಫೀಲ್ಡಿಂಗ್ ವೇಳೆ ಇಬ್ಬರು ಕ್ರಿಕೆಟ್‌ ಆಟಗಾರರ ಮಧ್ಯೆ ಡಿಕ್ಕಿ: ಒಬ್ಬ ಆಟಗಾರನಿಗೆ ಐಸಿಯುನಲ್ಲಿ ಚಿಕಿತ್ಸೆ

ಹುಬ್ಬಳ್ಳಿ: ಫೀಲ್ಡಿಂಗ್ ವೇಳೆ ಇಬ್ಬರು ಕ್ರಿಕೆಟ್‌ ಆಟಗಾರರ ಮಧ್ಯೆ ಡಿಕ್ಕಿ: ಒಬ್ಬ ಆಟಗಾರ ಐಸಿಯುಗೆ ದಾಖಲು
ಹುಬ್ಬಳ್ಳಿ: ಹುಬ್ಬಳ್ಳಿಯ ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದ ಪರಿಣಾಮ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್‌ಡಿಎಂ ಬಿ ತಂಡಗಳ ನಡುವೆ ಪಂದ್ಯದ ನಡೆದ ವೇಳೆ ಘಟನೆ ಸಂಭಸಿವಿದೆ.
ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್‌ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು ಪ್ರಜ್ವಲ್ ಬೋರಣ್ಣನವರ ಡಿಕ್ಕಿಯಾಗಿ, ಪ್ರಜ್ವಲ್ ಶಿರೋಳ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕ್ಲಬ್‌ನ ಸದಸ್ಯರು, ಕೆಎಸ್‌ಸಿಎ ಸಿಬ್ಬಂದಿ ಪ್ರಜ್ವಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಸಮಯದಲ್ಲಿಯೇ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಲವಾಗಿ ಪೆಟ್ಟು ಬಿದ್ದಿದ್ದು ದೃಢಪಟ್ಟಿದೆ.
ಪ್ರಜ್ವಲ್ ಶಿರೋಳ ಪ್ರಜ್ಞಾಹೀನರಾಗಿದ್ದರಿಂದ ತುರ್ತಾಗಿ ಶಸ್ತ್ರ ಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಹೇಳಿದ್ದರು. ಪೋಷಕರಿಗೆ ವಿಷಯ ತಿಳಿಸಿ ಒಂದೂವರೆ ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement