ಬೆಳಗಾವಿ, ಚಾಮರಾಜ ನಗರ ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ಡಿಸೆಂಬರ್ 10ರಂದು ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ.ಹಿರೇಮಠ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ರವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆರ್.ವೆಂಕಟೇಶ್ ಕುಮಾರ್​, ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್​ ಅವರನ್ನು ಅವರ ಬದಲಿಗೆ ವರ್ಗಾವಣೆ ಮಾಡಲಾಗಿದೆ. ಎಂ.ಜಿ.ಹಿರೇಮಠ ಹಾಗೂ ಡಾ.ರವಿ ಅವರಿಗೆ ಸ್ಥಳ ತೋರಿಸದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿರುವ ಜಿ.ಜಗದೀಶ್ ಅವರಿಗೆ ಬಿಎಂಆರ್​ಡಿಎ ಆಯುಕ್ತರಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement