ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಕಾರು ಅಪಘಾತ : ಸ್ಥಳದಲ್ಲೇ ಮೂವರು ಸಾವು

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಡಿವೈಡರಿಗೆ ಕಾರು ಡಿಕ್ಕಿಯಾಗಿ ಹಾರಿ ಮತ್ತೊಂದು ಕಾರಿನ ಮೇಲೆ ಬಿದ್ದಿದೆ. ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಳೆ ಬರುತ್ತಿದ್ದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 / 5. 0

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement