ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಮಂಡ್ಯ: ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ನಡೆದ ಬಗ್ಗೆ ವರದಿಯಾಗಿದೆ.
ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ ಚಾಮುಂಡೇಶ್ವರಿ (8) ಹಾಗೂ, 2 ವರ್ಷದ ಗಂಡು ಮಗು ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮುತ್ತಮ್ಮ ಮತ್ತು ಕುಟುಂಬದ ಸದಸ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ಮದ್ದೂರು ಕಡೆಯಿಂದ ಆಟೋದಲ್ಲಿ ವಾಪಸ್ ಆಗುತ್ತಿದ್ದರು. ಇದೇ ವೇಳೆ ಮಳವಳ್ಳಿಯಿಂದ ಮದ್ದೂರಿನತ್ತ ತೆರಳುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿಯೇ ಮುತ್ತಮ್ಮ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement