ಅಕಾಲಿಕ ಮಳೆಗೆ ಬೆಳೆ ನಾಶ; ಮನನೊಂದು ರೈತ ಆತ್ಮಹತ್ಯೆ

ಶಿರಸಿ:ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದಕ್ಕೆ ಮನನೊಂದು ರೈತನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ನರೂರು ಗ್ರಾಮದಲ್ಲಿ ನಡೆದ ವರದಿಯಾಗಿದೆ.
ಗಂಗಾಧರ ಫಕೀರಣ್ಣ ಶೇಷಣ್ಣನವರ (58) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದ್ದು, ಒಂದು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ಭತ್ತ, ಶುಂಠಿ ಹಾಗೂ ಇತರ ಬೆಳೆ ಹಾನಿಯಾಗಿದ್ದಕ್ಕೆ ತೀವ್ರವಾಗಿ ನೊಂದುಕೊಂಡು ಮಾನಸಿಕವಾಗಿ ನೋವನ್ನು ಅನುಭವಿಸುತ್ತಿದ್ದರು ಎನ್ನಲಾಗಿದೆ. ನ.17 ರಂದು ಕೀಟನಾಶಕ ಸೇವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬನವಾಸಿ ಠಾಣೆ ಯಲ್ಲಿ ಪ್ರಕಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement