ಅಕ್ಟೋಬರ್‌ನಲ್ಲಿ 20 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದ ವಾಟ್ಸಪ್‌!

ನವದೆಹಲಿ: ಫೇಸ್‌ಬುಕ್-ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್‌ ಅಕ್ಟೋಬರಿನಲ್ಲಿ ಭಾರತದಲ್ಲಿ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ.
ಸೆಪ್ಟೆಂಬರ್‌ನಲ್ಲಿ 2.2 ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿತ್ತು. ವಾಟ್ಸಪ್ ಪ್ಲಾಟ್‌ಫಾರ್ಮ್‌ನಲ್ಲಿನ ಸಂದೇಶಗಳು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಆಗಿವೆ. ಆದರೆ ಇದು ಬಳಕೆದಾರರ ವರದಿಗಳು, ಪ್ರೊಫೈಲ್ ಫೋಟೋಗಳು, ಗುಂಪು ಫೋಟೋಗಳು ಸೇರಿದಂತೆ ಲಭ್ಯವಿರುವ ಎನ್‌ಕ್ರಿಪ್ಟ್ ಮಾಡದ ಮಾಹಿತಿಯನ್ನು ಅವಲಂಬಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿ ತಿಳಿಸಿದೆ. ಜತೆಗೆ ಅದರ ಪ್ಲಾಟ್‌ಫಾರ್ಮ್‌ನಲ್ಲಿ ದುರ್ಬಳಕೆಯನ್ನು ಪತ್ತೆಹಚ್ಚಲು ಮತ್ತು ತಡೆಯಲು ವಿವಿಧ ರಿಪೋರ್ಟ್ ಮತ್ತು ಸುಧಾರಿತ ಆಲ್‌ ಟೂಲ್ಸ್‌ ಪರಿಕರಗಳು ಮತ್ತು ಸಂಪನ್ಮೂಲಗಳು‌ ಬಳಸಿದೆ ಎಂದು ಅದು ಹೇಳಿದೆ.
ಬಳಕೆದಾರರಿಂದ 500 ಕುಂದುಕೊರತೆಯ ವರದಿಗಳನ್ನು ಸ್ವೀಕರಿಸಿದೆ ಎಂದು ಕಂಪನಿ ತಿಳಿಸಿದೆ. ಐಟಿ ನಿಯಮಗಳು, 2021 ಕ್ಕೆ ಅನುಗುಣವಾಗಿ ಅಪ್ಲಿಕೇಶನ್ ಜುಲೈನಿಂದ ಕಂಪನಿ ಮಾಸಿಕ ವರದಿಗಳನ್ನು ಪ್ರಕಟಿಸುತ್ತಿದೆ. ನಿಯಮಗಳ ಪ್ರಕಾರ, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ) ಪ್ರತಿ ತಿಂಗಳು ಅನುಸರಣೆ ವರದಿಗಳನ್ನು‌ ಪ್ರಕಟಿಸಬೇಕು.
ವಾಟ್ಸ್‌ ಅಪ್‌ ತನ್ನ ಅತಿದೊಡ್ಡ ಮಾರುಕಟ್ಟೆಯಾದ ಭಾರತದಲ್ಲಿ 487 ಮಿಲಿಯನ್ ಬಳಕೆದಾರರನ್ನು ಹೊಂದಿದೆ.

ಪ್ರಮುಖ ಸುದ್ದಿ :-   ಏಷ್ಯನ್‌ ಗೇಮ್ಸ್‌ 2026 : ಬಿಲ್ಲುಗಾರಿಕೆಯಲ್ಲಿ 2, ಮಹಿಳಾ ರಿಲೇ ಓಟದಲ್ಲಿ 1 ಚಿನ್ನದ ಪದಕ ಗೆದ್ದ ಭಾರತ

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement