ಡಿಸೆಂಬರ್ 16, 17ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್‌ ಒಕ್ಕೂಟಗಳು

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆಯನ್ನು ವಿರೋಧಿಸಿ ಒಂಬತ್ತು ಒಕ್ಕೂಟಗಳ ಸಂಸ್ಥೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಡಿಸೆಂಬರ್ 16 ಮತ್ತು 17ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಸಂಚಾಲಕ ಮಹೇಶ್ ಮಿಶ್ರಾ ಗುರುವಾರ ಮಾತನಾಡಿ, ಸರ್ಕಾರವು ಪ್ರಸಕ್ತ ಸಂಸತ್ತಿನ ಅಧಿವೇಶನದಲ್ಲಿ ಬ್ಯಾಂಕಿಂಗ್ ಸುಧಾರಣಾ ಮಸೂದೆಯನ್ನು ಅಂಗೀಕರಿಸಲು ಬಯಸುತ್ತದೆ, ಇದು ಖಾಸಗೀಕರಣಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.
ಶುಕ್ರವಾರದಿಂದ (ಡಿಸೆಂಬರ್ 3) ಪ್ರಾರಂಭವಾಗುವ ಚಳವಳಿಯ ಭಾಗವಾಗಿ ಯುನೈಟೆಡ್ ಫೋರಂ ಈ ಮಸೂದೆಯನ್ನು ವಿರೋಧಿಸಿ ಧರಣಿ ನಡೆಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ ಒಕ್ಕೂಟಗಳು ಉದ್ಯೋಗಿ ಮತ್ತು ಸ್ನೇಹಿ ಬ್ಯಾಂಕಿಂಗ್ ನೀತಿಗಳೊಂದಿಗೆ ದೇಶದ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ನೀತಿಗಳನ್ನು ಬೆಂಬಲಿಸುತ್ತವೆ. ಆದರೆ ಬ್ಯಾಂಕ್‌ಗಳ ಖಾಸಗೀಕರಣವಲ್ಲ ಎಂದು ಮಿಶ್ರಾ ಹೇಳಿದ್ದಾರೆ. ಯುನೈಟೆಡ್ ಫೋರಂನಿಂದ ಮುಷ್ಕರ ಸಂಬಂಧ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ನೋಟಿಸ್ ನೀಡಲಾಗಿದೆ ಎಂದಿದ್ದಾರೆ.
.ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಮಂಡಿಸಲಿದೆ. ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದು, ಬ್ಯಾಂಕಿಂಗ್ ಕಂಪೆನಿಗಳ (ಅಂಡರ್‌ಟೇಕಿಂಗ್‌ಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಗಳಲ್ಲಿ ತಿದ್ದುಪಡಿಗಳನ್ನು ಮಾಡುವುದು, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಲ್ಲಿ ಪ್ರಾಸಂಗಿಕ ತಿದ್ದುಪಡಿಗಳನ್ನು ಈ ಮಸೂದೆ ಮಾಡಲಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement