ಸೋಂಕು ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಸನ್ನಿವೇಶ ಬಂದ್ರೆ ಶಾಲೆ ಬಂದ್‌ ಮಾಡ್ತೇವೆ: ಸಚಿವ ನಾಗೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೆ ಸರ್ಕಾರ ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ.
ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೋಂಕು ಹೆಚ್ಚಳ ಆತಂಕ ತಂದಿದೆ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಹೆಚ್ಚಳ ಕಂಡುಬಂದಿದೆ. 1-10 ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ಕೈಗೋಲಲಾಗುವುದು ಎಂದು ತಿಳಿಸಿದರು.
ಇವತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಇರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ. ನಾನು ನಾಳೆ, ನಾಡಿದ್ದು, ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ನೀತಿ ಸಂಹಿತೆ ಮುಗಿದ ಬಳಿಕ ಭೇಟಿ ಮಾಡುವುದಾಗಿ ಸಚಿವರು ತಿಳಿಸಿದರು.
ಕೋವಿಡ್ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರಲ್ಲ ಅಂತ ವರದಿಗಳು ಬಂದಿವೆ. ಇತ್ತ ತಜ್ಞರು ಮೂರನೇ ಅಲೆ ಫೆಬ್ರವರಿ ಅಂತ್ಯಕ್ಕೆ ಬರಬಹುದು ಅಂತಿದ್ದಾರೆ. ಪರೀಕ್ಷೆ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ ಅಗತ್ಯ ಕ್ರಮಕೈಗೊಳ್ಳುತ್ತೇವೆ. ಸೋಂಕು ಹೆಚ್ಚಾಗಿ ತರಗತಿ, ಪರೀಕ್ಷೆ ನಿಲ್ಲಿಸುವ ಸಂದರ್ಭ ಬಂದರೆ ನಿಲ್ಲಿಸುತ್ತೇವೆ. ಆದರೆ ಸದ್ಯ ಗಾಬರಿ ಪಡುವ ಗಾಬರಿಯಾಗುವ ಸನ್ನಿವೇಶ ಇಲ್ಲ ಎಂದರು.

ಪ್ರಮುಖ ಸುದ್ದಿ :-   ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement