ಅಕ್ಷರ ಸಂತ -ಪದ್ಮಶ್ರೀ ಪುರಸ್ಕೃತ 102 ವರ್ಷದ ನಂದಾ ಪ್ರಸ್ಟಿ ನಿಧನ

ಒಡಿಶಾ: ಒಡಿಶಾದ ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ನಂದಾ ಪ್ರಸ್ಟಿ ಅವರು ಇಂದು ನಿಧನರಾದರು.
102 ವರ್ಷದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವಾರ ಒಡಿಶಾದ ಜೈಪುರ ಜಿಲ್ಲೆಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಪ್ರಸ್ಟಿ ಅವರು ಕಳೆದ ಒಂದು ತಿಂಗಳಿಂದಲೂ ಜ್ವರ, ಕೆಮ್ಮು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ನಂದಾ ಮಾಸ್ಟರ್​ ಎಂದೇ ಖ್ಯಾತರಾಗಿದ್ದ ಇವರು ಈ ಬಾರಿಯ ನವೆಂಬರ್ 9ರಂದು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಂದ ಸ್ವೀಕರಿಸಿದ್ದರು. ಅಂದು ರಾಮನಾಥ ಕೋವಿಂದ್ ಅವರ ತಲೆ ಮೇಲೆ ಕೈಯಿಟ್ಟು ಆಶೀರ್ವಾದ ಮಾಡಿ ಪ್ರಶಸ್ತಿ ಸ್ವೀಕರಿಸಿದ್ದರು. ನಂದಾ ಪ್ರಸ್ಟಿ ಹಲವು ದಶಕಗಳಿಂದಲೂ ಒಡಿಶಾದ ಜೈಪುರ ಜಿಲ್ಲೆಯಲ್ಲಿ ಅನೇಕ ಮಕ್ಕಳು ಮತ್ತು ದೊಡ್ಡವರಿಗೆ ಉಚಿತ ಶಿಕ್ಷಣ ನೀಡುತ್ತಿದ್ದರು. ಹಣಕಾಸಿನ ಸಮಸ್ಯೆಯಿಂದಾಗಿ ಏಳನೇ ತರಗತಿಗೇ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಇವರು ತಮ್ಮ ಹಳ್ಳಿಯಲ್ಲಿ ಅನಕ್ಷರತೆ ಹೋಗಲಾಡಿಸಲು ಪಣತೊಟ್ಟಿದ್ದರು. ಸ್ವಾತಂತ್ರ್ಯ ಬಂದಾಗಿನಿಂದಲೂ ಮುಕ್ತ ಮನಸಿನಿಂದ ಉಚಿತವಾಗಿ ಶಿಕ್ಷಣ ನೀಡುತ್ತಿದ್ದರು.
ನಂದ ಪ್ರಸ್ಟಿ ಅವರ ನಿಧನದಿಂದ ನೋವಾಗಿದೆ. ಒಡಿಶಾದಲ್ಲಿ ಶಿಕ್ಷಣದ ಸಂತೋಷವನ್ನು ಹರಡಲು ಅವರು ಮಾಡಿದ ಪ್ರಯತ್ನಗಳಿಂದಾಗಿ ಗೌರವಾನ್ವಿತ ನಂದಾ ಸರ್ ತಲೆಮಾರುಗಳವರೆಗೆ ನೆನಪಿನಲ್ಲಿ ಉಳಿಯುತ್ತಾರೆ. ಅವರು ಕೆಲವು ವಾರಗಳ ಹಿಂದೆ ಪದ್ಮ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರದ ಗಮನ ಮತ್ತು ಪ್ರೀತಿಯನ್ನು ಸೆಳೆದರು. ಓಂ ಶಾಂತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement