ಜೈಪುರ: ಡಿಸೆಂಬರ್ 8 ರಂದು ಸಂಭವಿಸಿದ ಹೆಲಿಕಾಪ್ಟರ್ ಪತನದ ದುರಂತದಲ್ಲಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಸಾವಿಗೆ ದೇಶವೇ ಶೋಕಿಸಿತ್ತಿದೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಅವರ ಸಾವಿನ ಸಂಭ್ರಮಾಚರಣೆ ಮಾಡಿದ ಆರೋಪದ ಮೇರೆಗೆ ರಾಜಸ್ತಾನದ ಯುವಕ 21 ವರ್ಷದ ಜವ್ವಾದ್ ಖಾನ್ ಎಂಬಾತನನ್ನು ರಾಜಸ್ಥಾನದ ಟೋಂಕ್ ಪೊಲೀಸರು ಬಂಧಿಸಿದ್ದಾರೆ.
ಜವ್ವಾದ್ ಖಾನ್ ಜನರಲ್ ರಾವತ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ಇದರೊಂದಿಗೆ ಜಹನ್ನೂಮ್ ಮುಟ್ಟುವ ಮೊದಲೇ ಜೀವಂತವಾಗಿ ಸುಟ್ಟುಹೋದರು ಎಂಬ ಅವಹೇಳನಕಾರಿ ಸಾಲನ್ನೂ ಬರೆದು ಹಾಕಿದ್ದ. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾಜಸ್ಥಾನದ ಟೋಂಕ್ ಪೊಲೀಸರು ಆರೋಪಿ ಜವ್ವಾದ್ ಖಾನ್‍ನನ್ನು ಬಂಧಿಸಿದ್ದಾರೆ.
ಅಲ್ಲದೆ, ಟ್ವಿಟ್ಟರ್‌ನಲ್ಲಿ ಟೋಂಕ್ ಪೊಲೀಸರು ಈತನ ಬಂಧನದ ಮಾಹಿತಿ ನೀಡಿದ್ದಾರೆ. ಅವಹೇಳನಕಾರಿ ಹೇಳಿಕೆಯ ಮೇಲೆ ಅಬ್ದುಲ್ ನಕ್ಕಿ ಖಾನ್ ಎಂಬವರ ಮಗ ಜವ್ವಾದ್ ಖಾನ್‍ನನ್ನು ಬಂಧಿಸಲಾಗಿದೆ. 21 ವಯಸ್ಸಿನ ಜವ್ವಾದ್ ಖಾನ್ ರಾಜ್ ಟಾಕೀಸ್ ಬಳಿಯ ನಿವಾಸಿಯಾಗಿದ್ದಾನೆ. ಡಿಸೆಂಬರ್ 8ರಂದು ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿರುವುದರಿಂದ ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ಅವನನ್ನು ಸದ್ಯ ಬಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಜವ್ವಾದ್ ಖಾನ್ ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಅಲ್ಲದೆ, ಪ್ರೊಫೈಲ್‍ನಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಎಂದೂ ಬರೆದುಕೊಂಡಿದ್ದಾನೆ.


ನಿಮ್ಮ ಕಾಮೆಂಟ್ ಬರೆಯಿರಿ