ಹಳಿಯಾಳ : ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಿ ಮನೆಗೆ ಬಂದಿದ್ದ ಗ್ರಾಮ ಪಂಚಾಯತ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ತಾಲೂಕಿನ ಮುರ್ಕವಾಡದಲ್ಲಿ ಈ ಘಟನೆ ನಡೆದಿದ್ದು, ಲಕ್ಷ್ಮಣ ಶಿವಾರಾಯ ಮಾನೆ ( 60 ) ಮೃತ ದುರ್ದೈವಿ ಎಂದು ವರದಿ ತಿಳಿಸಿದೆ.
ಶುಕ್ರವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಲಕ್ಷ್ಮಣ ಅವರು ಮತದಾನ ಮಾಡಿ ಬಂದಿದ್ದರು. ಮುರ್ಕವಾಡದ ಮತ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಿದ್ದರು. ಮನೆಗೆ ಬಂದ ನಂತರ ಅವರಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ