ಕರ್ನಾಟಕದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ದೃಢ: ರಾಜ್ಯದಲ್ಲಿ ಮೂರಕ್ಕೇರಿದ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಓಮಿಕ್ರಾನ್ ಪ್ರಕರಣಗಳು ಪತ್ತೆಯಾದಂತಾಗಿದೆ.
ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ 34 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಓಮಿಕ್ರಾನ್ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಐವರು, ದ್ವಿತೀಯ ಸಂಪರ್ಕದಲ್ಲಿ 15 ಜನರನ್ನು ಪತ್ತೆ ಮಾಡಲಾಗಿದೆ. ಎಲ್ಲ ಸಂಪರ್ಕಿತರ ಸ್ಯಾಂಪಲ್ಸ್‌ ಪಡೆದು ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ರವಾನಿಸಲಾಗಿದೆ ಎಂದುಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ, ಪಂಜಾಬ್​ ಹಾಗೂ ಆಂಧ್ರಪ್ರದೇಶದಲ್ಲಿ ತಲಾ ಒಂದು ಪ್ರಕರಣಗಳು ಸೇರಿ ದೇಶದಲ್ಲಿ ಭಾನುವಾರ ಒಟ್ಟು 3 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ 17, ರಾಜಸ್ಥಾನದಲ್ಲಿ 9, ಗುಜರಾತ್‌ನಲ್ಲಿ 3, ಕರ್ನಾಟಕದಲ್ಲಿ 3, ದೆಹಲಿಯಲ್ಲಿ ಎರಡು, ಆಂಧ್ರಪ್ರದೇಶದಲ್ಲಿ 1 ಹಾಗೂ ಚಂಡೀಗಡದಲ್ಲಿ 1 ಪ್ರಕರಣಗಳು ದೃಢಪಟ್ಟಿವೆ.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement