ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭ: ಸ್ಪೀಕರ್ ಕಾಗೇರಿಯಿಂದ ಸಿದ್ಧತೆ ಪರಿಶೀಲನೆ

ಬೆಳಗಾವಿ : ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಇಂದು, ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ಧತೆ ಪರಿಶೀಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾಳೆಯಿಂದ ಆರಂಭವಾಗುವ ಚಳಿಗಾಲದ ಅಧಿವೇಶನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಾಳೆ, ಸೋಮವಾರ ಬೆಳಗ್ಗೆ 10:30ಕ್ಕೆ ಕಾರ್ಯಕಲಾಪಗಳ ಸಮಿತಿಯ ಸಭೆ ನಡೆಯಲಿದೆ. ಈ ಅಧಿವೇಶನದಲ್ಲಿ ಕನಿಷ್ಠ ಎರಡು ದಿನವಾದರೂ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆ ಮಾಡಬೇಕು ಎಂದು ಸಲಹೆಗಳು ಬಂದಿವೆ ಎಂದು ಕಾಗೇರಿ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಕಲಾಪ ಚೆನ್ನಾಗಿ ನಡೆಯಬೇಕು ಎಂದು ಹೇಳಿದರು.
ಸರ್ಕಾರ ಇದುವರೆಗೂ ಸದನದಲ್ಲಿ ಯಾವ ಯಾವ ಬಿಲ್ ಮಂಡಿಸಲಿದೆ ಎನ್ನುವ ಬಗ್ಗೆ ಮಾಹಿತಿ ಕಳುಹಿಸಿಲ್ಲ. ನಾಳೆಯೊಳಗೆ ಕಳುಹಿಸುತ್ತೇವೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ ಎಂದರು.
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತದೆ ಎಂದು ಸದಸ್ಯರು ಗೈರು ಹಾಜರಾಗುವುದು ಸರಿಯಲ್ಲ ಎಂದು ಕಾಗೇರಿ ಅವರು ಇದೇ ವೇಳೆ ಕಿವಿಮಾತು ಹೇಳಿದರು.

 

ನಿಮ್ಮ ಕಾಮೆಂಟ್ ಬರೆಯಿರಿ

advertisement