ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಬಳಿ ಭೀಕರ ಅಪಘಾತ: ನಾಲ್ವರ ಸಾವು

ಚಿತ್ರದುರ್ಗ: ತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಪರಿಣಾಮ ಲಾರಿ ಪಲ್ಟಿಯಾಗಿದ್ದು, ಈ ಲಾರಿಗೆ ಲಾರಿಗಳು ಹಾಗೂ ಕಾರು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ವರದಿಗಳು ತಿಳಿಸಿವೆ.
ಟೈರ್‌ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಲಾರಿ ಪಲ್ಲಟಿಯಾಗಿದೆ, ಇದಕ್ಕೆ ಹಿಂಬದಿಯಿಂದ ಬರುತ್ತಿದ್ದ ಲಾರಿಗಳು ಹಾಗೂ ಕಾರು ಡಿಕ್ಕಿ ಹೊಡೆದು ಅವಘಡಗಳು ಸಂಭವಿಸಿವೆ ಎಂದು ಹೇಳಲಾಗಿದೆ.ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಲಾರಿ ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆ ಹೋಗುವಾಗ ಈ ಘಟನೆ ಸಂಭವಿಸಿದೆ. ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪ (26), ರಮೇಶ್ (28), ಪ್ರಾಶಂತ್ ಹಟ್ಟಿ (36) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು.
ಸರಣಿ ಅಪಘಾತದಲ್ಲಿ 10ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಕ್ಷಾಂತರ ಮೌಲ್ಯದ ಈರುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಸ್ಥಳಕ್ಕೆ ಹಿರಿಯೂರು ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement