ನಾಳೆ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ಮತ ಎಣಿಕೆ, ಫಲಿತಾಂಶ ಪ್ರಕಟ:ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್‌

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಕಳೆದ ಶುಕ್ರವಾರ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ, ಮಂಗಳವಾರ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.
ಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ತುರುಸಿನ ಪೈಪೋಟಿ ನಡೆದಿತ್ತು. ನಾಳೆ ಮಂಗಳವಾರ ಯಾರು ಗೆಲ್ಲಲಿದ್ದಾರೆ ಎಂಬುದು ಗೊತ್ತಾಗಲಿದೆ.
ಈ ಬಾರಿ ದಾಖಲೆಯ ಶೇ.99.80ರಷ್ಟು ಮತದಾನವಾಗಿದೆ. ಸ್ಥಳೀಯ ಸಂಸ್ಥೆಗಳ ಮತದಾರರ ಮನವೊಲಿಸಲು ರಾಜಕೀಯ ಪಕ್ಷಗಳು ಸಾಕಷ್ಟು ಕಸರತ್ತು ನಡೆಸಿದ್ದವು. ಮತಕ್ಕಾಗಿ ಹಣ, ಜಾತಿ, ಉಡುಗೊರೆ ಅಸ್ತ್ರಗಳೂ ಬಳಕೆಯಾಗಿದ್ದವು.
ಈ ಚುನಾವಣೆಯಲ್ಲಿ ಫಲಿತಾಂಶವನ್ನು ಪ್ರಾಶಸ್ತ್ಯ ಮತಗಳ ಆಧಾರದಲ್ಲಿ ನಡೆಸಲಾಗುತ್ತದೆ. ಎಲ್ಲ ಅಭ್ಯರ್ಥಿಗಳ ಪಡೆದಿರುವ ಮೊದಲ ಪ್ರಾಶಸ್ತ್ಯ ಮತವನ್ನು ಎಣಿಕೆ ಮಾಡಲಾಗುತ್ತದೆ. ನಂತರ ಅಗತ್ಯ ಬಿದ್ದರೆ ದ್ವಿತೀಯ ಪ್ರಾಶಸ್ತ್ಯದ ಮತ ಎಣಿಸಲಾಗುತ್ತದೆ. ದ್ವಿಸದಸ್ಯ ಕ್ಷೇತ್ರಗಳಲ್ಲಿ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ.
ಮೈಸೂರು (ದ್ವಿ ಸದಸ್ಯ), ಮಂಡ್ಯ, ಕೊಡಗು, ಬೀದರ್, ಗುಲಬರ್ಗ, ವಿಜಯನಗರ (ದ್ವಿ ಸದಸ್ಯ), ಬೆಳಗಾವಿ (ದ್ವಿ ಸದಸ್ಯ), ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ (ದ್ವಿ ಸದಸ್ಯ), ಚಿಕ್ಕಮಗಳೂರು, ಹಾಸನ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಧಾರವಾಡ (ದ್ವಿ ಸದಸ್ಯ), ರಾಯಚೂರು, ಬಳ್ಳಾರಿ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮಂಗಳವಾರ ಬೆಳಿಗ್ಗೆ 8ರಿಂದ ಆರಂಭವಾಗಲಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement