ಹಾಸನ/ಮಡಿಕೇರಿ/ಬೀದರ: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಅವರು ಕಾಂಗ್ರೆಸ್ ಅಭ್ಯರ್ಥಿ ಮಂಥರ ಗೌಡ ಅವರ ವಿರುದ್ಧ 102 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಸುಜಾ ಕುಶಾಲಪ್ಪ 705 ಮತಗಳನ್ನು ಪಡೆದರೆ ಕಾಂಗ್ರೆಸ್ನ ಮಂಥರ ಗೌಡ ಅವರು 603 ಮತಗಳನ್ನು ಪಡೆದರು. ಕ್ಷೇತ್ರದಲ್ಲಿ ಒಟ್ಟು 1,324 ಮತಗಳು ಚಲಾವಣೆ ಆಗಿದ್ದವು.
ಇನ್ನು ಹಾಸನ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ. ಸೂರಜ ರೇವಣ್ಣ ಅವರು ಭರ್ಜರಿ ಜಯಗಳಿಸಿದ್ದಾರೆ. 1500ಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯಸಾಧಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಅವರು 2242 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 731 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ 354 ಮತಗಳನ್ನು ಪಡೆದರು.
ಇನ್ನು ಬೀದರ ಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಭೀಮರಾವ್ ಪಾಟೀಲ ಅವರು ಜಯಗಳಿಸಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರಾಭವಗೊಂಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಭಿಮರಾವ್ ಪಾಟೀಲ ಅವರು 1779 ಮತಗಳನ್ನು ಪಡೆದಿದ್ದಾರೆ. ಇವರು ಕಾಂಗ್ರೆಸ್ ಶಾಸಕ ರಾಜಶೇಖರ ಪಾಟೀಲ ಹುಮ್ನಾಬಾದ್ ಅವರ ಸಹೋದರ.


ನಿಮ್ಮ ಕಾಮೆಂಟ್ ಬರೆಯಿರಿ