
ಯಲ್ಲಾಪುರ: ಬೆಂಕಿ ಅವಘಢದಿಂದ ಖಾಸಗಿ ಬಸ್ಸೊಂದು ಧಗ, ಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಯಲ್ಲಾಪುರ ಪಟ್ಟಣದ ಜೋಡುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-63 ರಲ್ಲಿ ನಡೆದಿದೆ.
ಈ ಬಸ್ಸು ಮುಂಬೈಯಿಂದ ಕೇರಳಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿ 28 ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ತಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ಈ ಘಟನೆಗೆ ತಾಂತ್ರಿಕ ದೋಷ ಕಾರಣ ಎನ್ನಲಾಗಿದೆ. ಆದರೆ ಕಾರಣ ಸ್ಪಷ್ಟವಾಗಿ ಯಾಔಉದೆಂದು ತಿಳಿದುಬಂದಿಲ್ಲ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. .ಈ ಘಟನೆಯಿಂದ ಕೆಲಕಾಲ ಹೆದ್ದಾರಿ ಸಂಚಾರ್ ಬಂದಾಗಿತ್ತು.



ನಿಮ್ಮ ಕಾಮೆಂಟ್ ಬರೆಯಿರಿ