ವಿಕಲಾಂಗ ಮಹಿಳೆಯ ಕಾಲಿಗೆ ನಮಸ್ಕರಿಸಿದ ಮೋದಿ

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದ ದಿವ್ಯಾಂಗ ಮಹಿಳೆಯೊರ್ವರ ಕಾಲಿಗೆ ನಮಸ್ಕರಿಸಿದ್ದಾರೆ.
ಡಿ.13 ರಂದು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆ ಮೋದಿ ವಾರಾಣಸಿಗೆ ಆಗಮಿಸಿದ್ದರು. ಉದ್ಘಾಟನೆ ಬಳಿಕ ಮೋದಿ ಅವರನ್ನು ಭೇಟಿ ಮಾಡಲು ಶಿಖಾ ರಸ್ತೋಗಿ ಅವರು ಬಂದಿದ್ದರು. ಮಹಿಳೆಯನ್ನು ನೋಡಿದ ಪ್ರಧಾನಿ ತಕ್ಷಣವೇ ಆಕೆಯ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಈ ವೇಳೆ ಅವರು ಪ್ರಧಾನಿ ಮೋದಿಯವರನ್ನು ಕಂಡ ತಕ್ಷಣ ನಮಸ್ಕರಿಸಲು ಮುಂದಾಗಿದ್ದಾರೆ. ಆದರೆ ಅವರನ್ನು ತಡೆದು ಮೋದಿಯವರೇ ಆಕೆಯ ಕಾಲಿಗೆ ನಮಸ್ಕಾರಿಸಿದ್ದಾರೆ. ಅಂಗವಿಕಲ ಮಹಿಳೆಯ ಪಾದಗಳನ್ನು ಸ್ಪರ್ಶಿಸಿದ ದೃಶ್ಯವು ವೈರಲ್‌ ಆಗಿದೆ.
ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್ ಕೂಡ ಟ್ವಿಟ್ಟರ್‌ನಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದು ಎಲ್ಲಾ ಮಹಿಳಾ ಶಕ್ತಿಗೆ ದೊಡ್ಡ ಗೌರವವಾಗಿದೆ. ನಾವೆಲ್ಲರೂ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಶಿಖಾ ಸಹೋದರ ವಿಶಾಲ್ ರಸ್ತೋಗಿ ಮಾತನಾಡಿ, ಶಿಖಾ ಜನ್ಮತಃ ಅಂಗವಿಕಲಳು. ನನ್ನ ಸಹೋದರಿಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಮಹಿಳೆ ಕಾಲಿಗೆ ನಮಸ್ಕರಿಸಿದ ಮೋದಿ ಅವರ ಈ ಫೋಟೋವನ್ನು ಹಲವರು ಸಾಮಾಜಿಕ ಜಾಲತಣದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement