ಎರಡು ವರ್ಷಗಳಲ್ಲಿ ಜಿಲ್ಲಾ ಪಂಚಾಯತ್ 57 ನೌಕರರ ವಿರುದ್ಧ ಶಿಸ್ತು ಕ್ರಮ : ಸಿಇಒ ಶಿಲ್ಪಾ ಶರ್ಮಾ

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸೇರಿದಂತೆ ಎರಡು ವರ್ಷಗಳಿಂದ 57 ಜನ ನೌಕರರ ವಿರುದ್ಧ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಣಾಧಿಕಾರಿ ಶಿಲ್ಪಾ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 57 ಸಿಬ್ಬಂದಿ ಪೈಕಿ, 34 ಮಂದಿಯನ್ನು ಅಮಾನತು ಮಾಡಲಾಗಿದೆ. ನಾಲ್ವರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು 16, ಗ್ರಾಮ ಪಂಚಾಯತ್ ಕಾರ್ಯದರ್ಶಿ-4 (ಗ್ರೇಡ್-1), ಗ್ರಾಮ ಪಂಚಾಯತ್ ಕಾರ್ಯದರ್ಶಿ-6 (ಗ್ರೇಡ್-2), ದ್ವಿತೀಯ ದರ್ಜೆ ಲೆಕ್ಕ ಸಹಾಯಕರ-1, ಕ್ಲಾರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್-1, ಕರವಸೂಲಿಗಾರ-1 ಒಳಗೊಂಡು ಒಟ್ಟು 29 ಮಂದಿಯನ್ನು ಕಳೆದ ಎರಡು ವರ್ಷಗಳಲ್ಲಿ ಅಮಾನತ್ತುಗೊಳಿಸಲಾಗಿದೆ. ದ್ವಿತೀಯ ದರ್ಜೆ ಸಹಾಯಕ-1, ಕಿರಿಯ ಇಂಜಿನಿಯರ್-3, ಪ್ರಥಮ ದರ್ಜೆ ಸಹಾಯಕ-1 ಒಟ್ಟು-05 ಸೇರಿ ಒಟ್ಟು 34 ಮಂದಿ ಅಮಾನತ್ತುಗೊಳಿಸಲಾಗಿದೆ.
ದಂಡನೆ ವಿಧಿಸಿದ ಸಿಬ್ಬಂದಿಗಳ ಪ್ರಕರಣ: ಕಿರಿಯ ಇಂಜಿನಿಯರ್-3, ಕಾರ್ಯನಿರ್ವಾಹಕ ಅಧಿಕಾರಿಗಳು-2, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು-6 ಒಟ್ಟು-11 ಸಿಬ್ಬಂದಿಗೆ ದಂಡನೆ ವಿಧಿಸಲಾಗಿದೆ.
ಇಲಾಖಾ ವಿಚಾರಣೆ: ನಾಲ್ವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನು ದುರ್ನಡತೆ ಮತ್ತು ಕಾರ್ಯವೈಖರಿ ತೃಪ್ತಿಕರ ಇಲ್ಲದ ಕಾರಣ ವಜಾ ಮಾಡಿರುವ ಪ್ರಕರಣಗಳು (ಹೊರಗುತ್ತಿಗೆ) 8 ಇರುತ್ತವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement