ಹುಬ್ಬಳ್ಳಿ: ಚಲಿಸುವ ರೈಲಿನಿಂದ ಇಳಿಯುವಾಗ ಬಿದ್ದು ಬಿಬಿಎಂಪಿ ಎಂಜಿನಿಯರ್ ಸಾವು

ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಬಿಬಿಎಂಪಿ ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಅವರು ಬೆಳಗಾವಿಗೆ ಹೋಗುವ ರೈಲು ಹತ್ತಿದ್ದರು. ತಾನು ಬೇರೆ ರೈಲು ಹತ್ತಿರುವುದು ಗೊತ್ತಾಗುತ್ತಿದ್ದಂತೆಯೇ ರಂಗರಾಜು ಅವರು ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಇಳಿಯಲು ಹೋಗಿ ಬಿದ್ದು ಮೃತಪಟ್ಟಿದ್ದಾರೆ.
ಈ ಘಟನೆ ಭಾನುವಾರ ರಾತ್ರಿ ೧೧:೩೦ರ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ರಂಗರಾಜು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement