ನೆಲಮಂಗಲ: ಮಠದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಶವಪತ್ತೆಯಾದ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಸೋಲೂರು ಬಳಿಯ ಸಿದ್ದಗಂಗ ಮಠದ ಶಾಖಾ ಮಠ ಚಿಲುಮೆ ಮಠದ ಶ್ರೀಗಳ ಮೃತದೇಹ ನೇಣುಬಿಗಿದ ಸ್ಥತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಶ್ರೀ ಬಸವಲಿಂಗ ಸ್ವಾಮೀಜಿ(59) ಮೃತ ಸ್ವಾಮೀಜಿ.
1982ರಲ್ಲಿ ಸ್ವಾಮೀಜಿ ಸನ್ಯಾಸ ಸ್ವೀಕರಿಸಿದ್ದರು. ಅವರ ಪೂರ್ವಾಶ್ರಮದ ಹೆಸರು ಬಸವರಾಜ. ಅವರು ಸೋಮವಾರ ಬೆಳಿಗ್ಗೆ ಪೂಜಾಕೈಂಕರ್ಯಗಳನ್ನು ನೆರವೇರಿಸಿದ್ದರು. ನಂತರದಲ್ಲಿ ಮಠದ ಕಿಟಕಿಗೆ ನೇಣುಹಾಕಿಕೊಂಡ ಸ್ಥಿಯಲ್ಲಿ ಅವರ ಶವಪತ್ತೆಯಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ಹೆಚ್ಚಿನ ವಿಚಾರಣೆ ಆರಂಭಿಸಿದ್ದಾರೆ. ಮಠಕ್ಕೆ ವಿವಿಧ ಮಠಾಧೀಶರು ಭೇಟಿ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ