ಬೆಂಗಳೂರು: ರಾಜ್ಯ ಸರ್ಕಾರದಿಂದ ಓಮಿಕ್ರಾನ್ ವೈರಸ್ ನಿಯಂತ್ರಣ ಮಾಡುವ ಉದ್ದೇಶದಿಂದ ಡಿಸೆಂಬರ್ 28, 2021ರಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರ ವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿ ಹೇರಿ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ.
ಈ ಸಮಯದಲ್ಲಿ ಯಾವುದಕ್ಕೆ ಅನುಮತಿ ಇದೆ ಹಾಗೂ ಯಾವುದಕ್ಕೆ ಇಲ್ಲ ಎನ್ನುವ ಬಗ್ಗೆ ಮಾಹಿತಿ ನೀಡಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ನೂತನ ಮಾರ್ಗಸೂಚಿ ಪ್ರಕಟಿಸಿದ್ದು, ದಿನಾಂಕ 28-12-2021ರಿಂದ 07-01-2022ರವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ದಿನಾಂಕ 30-12-2021ರಿಂದ ದಿನಾಂಕ 02-01-2022ರ ವರೆಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲಾ ಸಿಬ್ಬಂದಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ ಸೂಚಿಸಲಾಗಿದೆ.
ದಿನಾಂಕ 28-12-2022ರಿಂದ ಸಭೆ, ಸಮಾರಂಭ, ಕಾನ್ಫೆರೆನ್ಸ್, ಮದುವೆ ಸೇರಿದಂತೆ ಇತರೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳಿಗೆ 300 ಜನರಿಗೆ ಮಾತ್ರ ಸೇರಲು ಅವಕಾಶ ನೀಡಲಾಗಿದೆ. ಈ ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಗಡಿ ಭಾಗಗಳಲ್ಲಿ ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ತಪಾಸಣೆ ಮಾಡಬೇಕು ಹಾಗೂ ಕೋವಿಡ್ ನೆಗೆಟಿವ್, ಇಲ್ಲವೇ ಸಂಪೂರ್ಣ ಲಸಿಕೆ ವರದಿಯನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.
ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಯಾವುಕ್ಕೆ ಅನುಮತಿ. ಇದೆ? ಯಾವುದಕ್ಕೆ ಇಲ್ಲ.?...
* ನೈಟ್ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ
* ಈ ಸಮಯದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
* ನೈಟ್ ಕರ್ಫ್ಯೂ ವೇಳೆ ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ನೌಕರರು ಗುರುತಿನ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ.
* ನೈಟ್ ಕರ್ಫ್ಯೂ ಸಮಯದಲ್ಲಿ ಟೆಲಿಕಾಂ, ಇಂಟರ್ನೆಟ್ ಸರ್ವೀಸ್ ನೀಡುವವರ ಓಡಾಟಕ್ಕೂ ಅವಕಾಶ ನೀಡಲಾಗಿದೆ.
*ಅಗತ್ಯ ಸೇವೆ ಒದಗಿಸುವ ಸಿಬ್ಬಂದಿ ಓಡಾಟಕ್ಕೆ ನೈಟ್ ಕರ್ಫ್ಯೂ ವೇಳೆ ಅನುಮತಿ ನೀಡಲಾಗಿದೆ.
*ಔಷಧ ಅಂಗಡಿಗಳು ಈ ಸಂದರ್ಭದಲ್ಲಿ ತೆರೆದಿರುತ್ತದೆ.
* ನೈಟ್ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಅಂಗಡಿಗಳು-ಮಳಿಗೆಗಳನ್ನುತೆರೆಯಲು ಅವಕಾಶವಿಲ್ಲ
* ಮನೆ ಡಿಲಿವರಿ ಆಹಾರ ಸರಬರಾಜಿಗೆ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ.
* ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶವಿದೆ
* ರಾತ್ರಿ ಸಂದರ್ಭದಲ್ಲಿ ಬಸ್, ರೈಲು, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ
* ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ