ವಿವಾದದ ಬಳಿಕ ತಮ್ಮ ಮತಾಂತರ ಹೇಳಿಕೆ ಬೇಷರತ್‌ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಉಡುಪಿ: ಹಿಂದೂ ಧರ್ಮದಿಂದ ಮತಾಂತರಗೊಂಡು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು ಅದನ್ನು ಮಠ ದೇವಸ್ಥಾನಗಳಲ್ಲಿ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆದಿದ್ದಾರೆ.
ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರ್ಪಣಮ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ ಮುಸ್ಲಿಮರನ್ನ, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು.ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದು ಹೇಳಿದರು.
ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ತಮ್ಮ ಹೇಳಿಕೆಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ಸಂಸದ ತೇಜಸ್ವಿ ಸೂರ್ಯ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುಜ್ಜೀವನ’ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement