ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮನೆಮನೆ ಆರೋಗ್ಯ ಸಮೀಕ್ಷೆ ನಡೆಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ. ತೀವ್ರ ಉಸಿರಾಟ ಸಮಸ್ಯೆ ಇರುವ ಕೇಸ್ಗಳ ಸರ್ವೆಗೆ ಆದೇಶ ನೀಡಿದೆ. ಆರೋಗ್ಯ ಸರ್ವೆ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ಸರ್ಕಾರ ಆದೇಶ ನೀಡಿದ್ದು ನಾಳೆಯಿಂದ ರಾಜ್ಯಾದ್ಯಂತ ILI (influenza-like illness), SARI (Severe acute respiratory infections) ಕೇಸ್ಗಳ ಸಮೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ನಾಳೆಯಿಂದ ಅಂದರೆ ಡಿಸೆಂಬರ್ ೨೯ರಿಂದ 2022ರ ಜನವರಿ 15ರ ರವರೆಗೆ ಆರೋಗ್ಯ ಸರ್ವೆ ಕಾರ್ಯ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ನಡೆಸಿ ಪೋರ್ಟಲ್ನಲ್ಲಿ ವರದಿ ಹಾಕಬೇಕು ಎಂದು ಸೂಚನೆ ನೀಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ