ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಮತ್ತು ಅನಂತ್ನಾಗ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಆರು ಜೈಶ್-ಎ-ಮುಹಮ್ಮದ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಹತರಾದ ಉಗ್ರರನ್ನು ತ್ರಾಲ್ನ ಮೊಹಮ್ಮದ್ ಶಫಿ ದಾರ್, ಮಿರ್ಹಾಮಾದ ಉಜಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಬ್ಬರೂ ನಿಷೇಧಿತ ಜೈಶ್-ಎ-ಮುಹಮ್ಮದ್ ಭಯೋತ್ಪಾದಕ ಸಂಘಟನೆಯ ಸಿ ವರ್ಗೀಕರಿಸಿದ ಭಯೋತ್ಪಾದಕರು ಮತ್ತು ಒಬ್ಬನನ್ನು ಪಾಕಿಸ್ತಾನಿ ಭಯೋತ್ಪಾದಕ ಶಾಹಿದ್ ಅಲಿಯಾಸ್ ಶಹಜೈದ್ ಎಂದು ಗುರುತಿಸಲಾಗಿದೆ . ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ.
ಎನ್ಕೌಂಟರ್ ಸೈಟ್ನಿಂದ 02 ಎಕೆ 47 ಮತ್ತು ಒಂದು ಎಂ4 ರೈಫಲ್ಗಳು ಮತ್ತು ಇತರ ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಮ್ಮು-ಕಾಶ್ಮೀರದ ಅನಂತ್ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಜೈಶ್ ಉಗ್ರರು ಬಲಿಯಾಗಿದ್ದರು. ಕುಲ್ಗಾಮ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಜೈಶ್ ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ವರದಿ ವಿವರಿಸಿದೆ.
ಇದೊಂದು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆ ಎಂದಿರುವ ಐಜಿಪಿ ವಿಜಯ್ ಕುಮಾರ್, ಆರು ಮಂದಿ ಉಗ್ರರಲ್ಲಿ ಇಬ್ಬರು ಪಾಕಿಸ್ತಾನಿಯರು ಹಾಗೂ ಇಬ್ಬರು ಸ್ಥಳೀಯರು ಎಂದು ಗುರುತಿಸಲಾಗಿದ್ದು, ಉಳಿದ ಇಬ್ಬರ ಬಗ್ಗೆ ಇನ್ನಷ್ಟೇ ಗುರುತು ಪತ್ತೆ ಹಚ್ಚಬೇಕಾಗಿದೆ ಎಂದು ವಿಜಯ್ ಕುಮಾರ್ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ