ನೈಸ್‌ ರಸ್ತೆಯಲ್ಲಿ ಅಪಘಾತ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ವ್ಯಾಗನರ್ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ ,ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ-ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕೇರಳ ಮೂಲದ ನಾಲ್ವರು ಮೃತಪಟ್ಟವರು. ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಲಾರಿ ಸೇರಿ ಸರಣಿ ಅಪಘಾತದಲ್ಲಿ ಜಖಂಗೊಂಡ ಇತರ ವಾಹನಗಳಲ್ಲಿದ್ದ ಐವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ನಾಲ್ವರು ವ್ಯಾಗನಾರ್ ಕಾರಿನಲ್ಲಿ ಬನ್ನೇರುಘಟ್ಟದಿಂದ ರಾತ್ರಿ ೯:೩೦ರ ವೇಳೆ ಹೋಗುತ್ತಿದ್ದಾಗ ಮಾರ್ಗ ಮಧ್ಯದ ನೈಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಾರಣದಿಂದಾಗಿ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ತಮಿಳುನಾಡು ನೋಂದಣಿಯ ಲಾರಿಯೊಂದು ಗುದ್ದಿದೆ. ಪರಿಣಾಮ ವ್ಯಾಗನರ್-ಕ್ವಾಲಿಸ್-ಸ್ವಿಫ್ಟ್ ಕಾರು ಸೇರಿದಂತೆ ೬ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಸರಣಿ ಅಪಘಾತದ ಪರಿಣಾಮ ನೈಸ್ ರಸ್ತೆಯಲ್ಲಿ ಸುಮಾರು ಎಂಟು ಕಿಮೀನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸುದ್ದಿ ತಿಳಿದ ತಕ್ಷಣವೇ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement