ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವೀರ್ ಸಾವರ್ಕರ ಮೊಮ್ಮಗ

ಪುಣೆ: ವಿನಾಯಕ ದಾಮೋದರ್ ಸಾವರ್ಕರ ವಿರುದ್ಧದ ಹಳೆಯ ಟೀಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಇನ್ನಷ್ಟು ತೊಂದರೆ ಉಂಟುಮಾಡುವ ಸಾಧ್ಯತೆಯಿದ್ದು, ಪುಣೆಯ ನ್ಯಾಯಾಲಯದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ.
ಸಾವರ್ಕರ ಅವರ ಮೊಮ್ಮಗ ಸತ್ಯಕಿ ಸಾವರ್ಕರ ಅವರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಬುಧವಾರ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ದೂರು ದಾಖಲಿಸಿದ್ದಾರೆ.
ಮೋದಿ ಉಪನಾಮದ ಕುರಿತಾಗಿನ ಕ್ರಿಮಿನಲ್‌ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಯ ನಂತರ ರಾಹುಲ್‌ ಗಾಂಧಿ ಸಂಸತ್ತಿನಿಂದ ಅನರ್ಹಗೊಂಡಿದ್ದಾರೆ.
ಈ ಪ್ರಕರಣದಲ್ಲಿಯೂ ರಾಹುಲ್‌ ಗಾಂಧಿ ಅವರು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ವೀರ್‌ ಸಾವರ್ಕರ ಅವರ ಹೆಸರನ್ನು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹಳೆಯ ವೀಡಿಯೋವೊಂದರಲ್ಲಿ “ಸಾವರ್ಕರ ಅವರು ತಮ್ಮ ಪುಸ್ತಕದಲ್ಲಿ ಇತರ 5-6 ಮಂದಿ ಮುಸ್ಲಿಂ ವ್ಯಕ್ತಿಯನ್ನು ಹೊಡೆದ ನಂತರ ತಾನು ಸಂತೋಷಪಡುತ್ತೇನೆ ಎಂಬುದಾಗಿ ಹೇಳಿದ್ದಾರೆ. ಐವರು ಸೇರಿ ಒಬ್ಬ ವ್ಯಕ್ತಿಯನ್ನು ಹೊಡೆದರೆ ಮತ್ತು ಅವರಲ್ಲಿ ಒಬ್ಬರು ಸಂತೋಷಪಟ್ಟರೆ ಇದು ಹೇಡಿತನ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

ನಾವು ರಾಹುಲ್ ಗಾಂಧಿ ಮತ್ತು ಅವರ ಕೆಲವು ಅನುಯಾಯಿಗಳಿಂದ ತಥಾಕಥಿತ ಹೇಳಿಕೆಗಳ ಬಗ್ಗೆ ಸಾಕಷ್ಟು ಕೇಳುತ್ತಿದ್ದೇವೆ. ಹೀಗಾಗಿ ನಾವು ನ್ಯಾಯಾಲಯವನ್ನು ತಲುಪಿದ್ದೇವೆ” ಎಂದು ಸತ್ಯಕಿ ಅವರು ಹೇಳಿದರು.
ಇತ್ತೀಚೆಗೆ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ರಾಹುಲ್‌ ಗಾಂಧಿ ಅವರು, ಸಾವರ್ಕರ್ ಅವರು ತಮ್ಮ ಪುಸ್ತಕದಲ್ಲಿ ತಮ್ಮ ಸ್ನೇಹಿತರು ಮತ್ತು ಅವರು ಮುಸ್ಲಿಂ ವ್ಯಕ್ತಿಯನ್ನು ಹೊಡೆದಾಗ ತಾನು ಸಂತೋಷಪಟ್ಟಿದ್ದರ ಬಗ್ಗೆ ಬರೆದಿದ್ದಾರೆ ಎಂದು ಹೇಳಿದ್ದರು ಎಂದು ಆರೋಪಿಸಲಾಗಿದೆ.

ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ (ಐಒಸಿ) ಯುಕೆ ಚಾಪ್ಟರ್ ಆಯೋಜಿಸಿದ್ದ ಭಾರತೀಯ ಡಯಾಸ್ಪೊರಾ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹೀಗೆ ಹೇಳಿದ್ದರು ಎನ್ನಲಾಗಿದೆ.
ಇತ್ತೀಚೆಗೆ, ‘ಮೋದಿ ಉಪನಾಮ’ ಹೇಳಿಕೆಯಿಂದ ಶಿಕ್ಷೆಗೆ ಒಳಗಾಗಿ ಅನರ್ಹಗೊಂಡ ನಂತರ, ಗಾಂಧಿ ಮತ್ತೆ ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡು, “ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ, ಗಾಂಧಿಗಳು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement