ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟ: ಜೂನ್‌ 6ರಿಂದ ಶಿಕ್ಷಕರ ವರ್ಗಾವಣೆ ಆರಂಭ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದೆ.
ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ 31 ರಂದು ಒಪ್ಪಿಗೆ ನೀಡಿತ್ತು. ಈಗ ಇಲಾಖೆಯ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಈಗ ವೇಳಾಪಟ್ಟಿ ಪ್ರಕಟಿಸಿದೆ. ಇದರಿಂದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು / ತತ್ಸಮಾನ ವೃಂದದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್‌ ಜೂನ್‌ 6 ರಿಂದ ಆರಂಭಗೊಳ್ಳಲಿದೆ. (ಪರಿಷ್ಕೃತ ವೇಳಾಪಟ್ಟಿ ಪಿಡಿಎಫ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ-teachers-trnsfer-Revised-Time-table02.06.2023 )

ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದ್ದು, ಜೂನ್‌6 ರಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ಪರಿಷ್ಕೃತ ಕರಡು ಪಟ್ಟಿ ಪ್ರಕಟವಾಗಲಿದೆ. ಜೂನ್‌ 10 ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಜೂನ್‌ 6 ಮತ್ತು 10 ರೊಳಗೆ ವರ್ಗಾವಣೆ ತಂತ್ರಾಂಶದ ಮೂಲಕ ಆದ್ಯತೆ ಕೋರಿ ಅರ್ಜಿ, ದಾಖಲೆ ಅಪ್‌ಲೋಡ್‌ ಮಾಡಲು ಅವಕಾಶ ನೀಡಲಾಗುತ್ತದೆ. ಜೂನ್‌ 14ರಂದು ಕರಡು ಜೇಷ್ಠತಾ ಪಟ್ಟಿ ಪ್ರಕಟವಾಗಲಿದೆ.
ಜೂನ್‌ 17 ಕ್ಕೆ ಕೌನ್ಸಿಲಿಂಗ್ಗೆ ಲಭ್ಯವಿರುವ ವೃಂದವಾರು ವಿಷಯವಾರು ಖಾಲಿ ಹುದ್ದೆಗನ್ನು ಪ್ರಕಟಿಸಲಾಗುತ್ತದೆ. ಜುಲೈ 27 ಕ್ಕೆ ಅಂತಿಮ ಆದ್ಯತಾ ಪಟ್ಟಿಯಂತೆ ಪರಸ್ಪರ ವರ್ಗಾವಣೆಗಳ ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ನಡೆಯಲಿದೆ.

ಪ್ರಮುಖ ಸುದ್ದಿ :-   ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

ಕಳೆದ ವರ್ಷ ಜಾರಿಗೆ ತಂದಿರುವ ಹೊಸ ವರ್ಗಾವಣೆ ನಿಯಮದಂತೆ ಈ ವರ್ಗಾವಣೆ ನಡೆಯಲಿದ್ದು, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು, ಮಲೆನಾಡು ವಲಯ ಹಾಗೂ ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲೂಕುಗಳಿಗೆ ಹೋಗ ಬಯಸುವವರಿಗೆ ವಿಶೇಷ ಆದ್ಯತೆ ದೊರೆಯಲಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement