ಜೂನ್ 18ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 18ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣದ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ಬಳ್ಳಾರಿಯಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಮುಂದುವರೆಯಲಿದೆ.
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಅದು ತಿಳಿಸಿದೆ.
ಬೆಂಗಳೂರು ಎಚ್​ಎಎಲ್​, ಕಾರವಾರ, ಹೊಸಕೋಟೆ, ತಿಪಟೂರು, ಗೋಣಿಕೊಪ್ಪಲು, ಕೋಟ, ಹೊನ್ನಾವರ, ಮಾಲೂರು, ಅಂಕೋಲಾ, ಮಂಕಿ, ಬೆಳ್ತಂಗಡಿ, ಹುಣಸೂರು, ಕದ್ರಾ, ಬೇಲಿಕೇರಿ, ಪುತ್ತೂರು, ಕುಂದಾಪುರ, ಜ್ಞಾನಭಾರತಿ, ದೊಡ್ಡಬಳ್ಳಾಪುರ, ಟಿ ನರಸೀಪುರ ಮೊದಲಾದೆಡೆ ಮಳೆಯಾಗಿದೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement