ಜಮ್ಮು-ಕಾಶ್ಮೀರದ ಶೋಪಿಯಾನದಲ್ಲಿ ನಾಲ್ವರು ಉಗ್ರರು ಹತ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಮುಖಾಮುಖಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.
ಪೊಲೀಸ್, ಸಿಆರ್‌ಪಿಎಫ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯನ್ನು ಸೋಮವಾರ ಮುಂಜಾನೆಯಿಂದ ನಡೆಸಿದ್ದು, ಶೋಪಿಯಾನ್‌ನ ಮಣಿಹಾಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಈ ಪ್ರದೇಶಕ್ಕೆ ಮುತ್ತಿಗೆ ಹಾಕಿದ ನಂತರ, ಅಲ್ಲಿ ಅಡಗಿರುವ ಉಗ್ರರನ್ನು ಶರಣಾಗುವಂತೆ ಕೇಳಿಕೊಂಡರು. ಆದರೆ, ಉಗ್ರರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು ಮತ್ತು ಸೈನಿಕರ ಮೇಲೆ ಗುಂಡು ಹಾರಿಸಿದರು. ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಶ್ರೀನಗರದ ಸೇನಾ ವಕ್ತಾರರು ತಿಳಿಸಿದ್ದಾರೆ.ಹತ್ಯೆಗೀಡಾದ ಉಗ್ರರಿಂದ ಎಕೆ ರೈಫಲ್ ಮತ್ತು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ ಎಂದರು.
ಇದು ಎರಡು ವಾರಗಳಲ್ಲಿ ಶೋಪಿಯಾನ್‌ ಪ್ರದೇಶದಲ್ಲಿ ನಡೆದ ಎರಡನೇ ಗುಂಡಿನ ಚಕಮಕಿಯಾಗಿದೆ.ಶೋಪಿಯಾನ್‌ನ ರಾವಲ್ಪೋರಾ ಪ್ರದೇಶದಲ್ಲಿ ಮೂರು ದಿನಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಕಳೆದ ವಾರ ಉನ್ನತ ಕಮಾಂಡರ್ ವಿಲಾಯತ್ ಲೋನ್ ಅಲಿಯಾಸ್ ಸಜ್ಜಾದ್ ಅಫ್ಘಾನಿ ಸೇರಿದಂತೆ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರನ್ನು ಕೊಂದಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement