ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ನಿಧನ

ಕೋಲ್ಕತ್ತಾ :  ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಬುದ್ಧದೇವ ಭಟ್ಟಾಚಾರ್ಯ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಬೆಳಿಗ್ಗೆ ತಮ್ಮ ಕೋಲ್ಕತ್ತಾದ ಮನೆಯಲ್ಲಿ ನಿಧನರಾದರು. ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು.
ಅವರು ಪತ್ನಿ ಮೀರಾ ಮತ್ತು ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ.
ಭಟ್ಟಾಚಾರ್ಯ ಅವರು 2023, ಜುಲೈ 29 ರಂದು ಬಹು ಕಾಯಿಲೆಗಳೊಂದಿಗೆ ಅಲಿಪೋರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ‘ಟೈಪ್ 2’ ಉಸಿರಾಟದ ವೈಫಲ್ಯವನ್ನು ಗುರುತಿಸಲಾಯಿತು. ಅವರು COPD (ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ) ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು.
ಕಳೆದ ಕೆಲವು ವರ್ಷಗಳಿಂದ, ಭಟ್ಟಾಚಾರ್ಯ ಅವರ ಹದಗೆಟ್ಟ ಆರೋಗ್ಯದ ಕಾರಣ ಸಾರ್ವಜನಿಕ ಲೈಮ್‌ ಲೈಟ್‌ನಿಂದ ದೂರ ಉಳಿದಿದ್ದರು. ಹಾಗೂ ಪಾಮ್ ಅವೆನ್ಯೂ ಅಪಾರ್ಟ್‌ಮೆಂಟ್‌ಗೆ ಸೀಮಿತರಾಗಿದ್ದರು.

2019 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಆಮ್ಲಜನಕದ ಸಪೋರ್ಟ್‌ನೊಂದಿಗೆ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಎಡಪಕ್ಷಗಳ ರ್ಯಾಲಿಗೆ ಅಘೋಷಿತವಾಗಿ ಆಗಮಿಸಿ ಪಕ್ಷದ ಕಾರ್ಯಕರ್ತರನ್ನು ಅಚ್ಚರಿಗೊಳಿಸಿದ್ದು ಅವರು ಕೊನೆಯದಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾಗಿದೆ. ಭಟ್ಟಾಚಾರ್ಯ ಅವರು ಅನಾರೋಗ್ಯದ ಕಾರಣದಿಂದ 2015ರಲ್ಲಿ ಸಿಪಿಐ(ಎಂ)ನ ಪಾಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿಯಿಂದ ಕೆಳಗಿಳಿದಿದ್ದರು ಮತ್ತು 2018ರಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿಯ ಸದಸ್ಯತ್ವವನ್ನು ತ್ಯಜಿಸಿದ್ದರು.
2000ದಲ್ಲಿ ಪಕ್ಷದ ವರಿಷ್ಠ ಜ್ಯೋತಿ ಬಸು ಅವರಿಂದ ಭಟ್ಟಾಚಾರ್ಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಬಂಗಾಳದಲ್ಲಿ ಎಡರಂಗದ 34 ವರ್ಷಗಳ ಆಳ್ವಿಕೆಯಲ್ಲಿ, ಭಟ್ಟಾಚಾರ್ಯ ಅವರು ಸತತ 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿಯಾಗಿದ್ದಾರೆ.
ಭಟ್ಟಾಚಾರ್ಯ ಅವರು 2011 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಎದುರು ಸೋತಿತು. ರಾಜ್ಯದಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗದ 34 ವರ್ಷಗಳ ಆಡಳಿತವು ಕೊನೆಗೊಂಡಿತು.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement