ಸಂಕೇಶ್ವರದ ನ್ಯಾಯವಾದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ : ಇಬ್ಬರು ವಶಕ್ಕೆ

ಬೆಳಗಾವಿ : ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂಕೇಶ್ವರದ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಗರ ಮಾನೆ ಎಂಬ ನ್ಯಾಯವಾದಿ ಮೇಲೆ ಹಲ್ಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಫೆಬ್ರವರಿ 11 ರಂದು ತಮ್ಮ ಸ್ವಗ್ರಾಮವಾದ ಸೊಲ್ಲಾಪುರ ಗ್ರಾಮದ ಗೇಟ್ ಹತ್ತಿರ ತನ್ನ ಮೇಲೆ ಸುಮಾರು 10 ಜನರು ಸೇರಿ ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ ಎಂದು ಅವರು ಸಂಕೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
ಒಂದು ಕಡೆಯ ಗುಂಪಿನ ಕಕ್ಷಿದಾರನಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಕಾರಣದ ಹಿನ್ನೆಲೆಯಲ್ಲಿ ಈ ಹಲ್ಲೆಯನ್ನು ಮಾಡಲಾಗಿದೆ ಎಂದು ಪೊಲೀಸರಿಗೆ ನೀಡಲಾಗಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಸಂಕೇಶ್ವರ ಪೊಲೀಸರು ‌ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಇನ್ನುಳಿದವರು ಪತ್ತೆಗಾಗಿ ಶೋಧ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement