ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಬೆಕ್ಕಿನಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಘವೇಂದ್ರ ಅವರಂತಹ ಸಂಸರನ್ನು ಪಡೆದ ನೀವೇ ಧನ್ಯವಂತರು. ಏಕೆಂದರೆ ತಮ್ಮ ಕ್ಷೇತ್ರದಲ್ಲಿಯಾವ ಕೆಲಸಗಳಾಗಬೇಕೆಂದು ನೋಡಿಕೊಂಡು ಆ ಎಲ್ಲ ಕೆಲಸಗಳನ್ನು ಮಾಡಿ ತೋರಿಸಿಕೊಟ್ಟ ಧೀಮಂತ ನಾಯಕ ಎಂದರೆ ತಪ್ಪಾಗಲಾರದು. ರಾಘವೇಂದ್ರ ಅವರನ್ನು ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ ಎಂದರು.

“ಇನ್ನೇನು ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ಬರಲಿದೆ. ರಾಘವೇಂದ್ರ ಅವರೇ ಸ್ಪರ್ಧಿಸುತ್ತಾರೆ. ಅವರು ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಸಮತೂಕ ಮಾಡಿ ಅವರನ್ನು ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ. ಅವರು ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಸಮತೂಕ ಮಾಡಿ ಅವರನ್ನು ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ. ಕ್ಷೇತ್ರದ ಜನತೆಗೆ ಏನು ಬೇಕು? ಅವರು ಬಯಸಿದ್ದು ಅಭಿವೃದ್ಧಿ. ಅಂತಹ ನಾಯಕನನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯ. ” ಎಂಬುದು ನನ್ನ ಅಭಿಪ್ರಾಯ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಂದು ಹೇಳಿದರು.

ಪ್ರಮುಖ ಸುದ್ದಿ :-   1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ‘ ಗುರು ಬಸವಶ್ರೀ ‘ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗುರು ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದ ಸಂತಸ ವ್ಯಕ್ತಪಡಿಸಿದ ಶಿವಶಂಕರಪ್ಪ, ದಾವಣಗೆರೆ ಮಹಾಸಭಾದ ಸಮಾವೇಶದಲ್ಲಿ ಮಾಡಿದ ನಿರ್ಣಯದಂತೆ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ನೇಮಿಸುವಂತೆ ಸರಕಾರಕ್ಕೆ ಮನವಿ ಮಾಡಿದ ನಂತರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅನುಭವ ಮಂಟಪದ ಮೂಲಕ ಸಮುದಾಯಗಳನ್ನು ಒಗ್ಗೂಡಿಸಿದ ಮಹಾನ್ ನಾಯಕ ಬಸವಣ್ಣ ಎಂದು ಶಿವಶಂಕರಪ್ಪ ಹೇಳಿದರು.

ಗುರು ಹಿರಿಯರ ಮಾರ್ಗದರ್ಶನದಲ್ಲಿಭಾರತ ದೇಶವು ಸದೃಢವಾಗಿ ಮುನ್ನಡೆಯುತ್ತಿದ್ದು, ಶ್ರೇಷ್ಠ ಧಾರ್ಮಿಕ ಹಿನ್ನೆಲೆ ಹೊಂದಿರುವ ಐತಿಹಾಸಿಕ ದೇಶ ನಮ್ಮದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜಿಲ್ಲೆಯಲ್ಲಿಅಭಿವೃದ್ಧಿ ಕಾರ್ಯಕ್ರಮ ಆಗುತ್ತಿದ್ದು, ಎಫ್‌.ಎಂ, ಹೆದ್ದಾರಿ ಕಾಮಗಾರಿ, ಪ್ರವಾಸಿ ತಾಣಗಳ ಅಭಿವೃದ್ಧಿ ಹೀಗೆ ನೂರಾರು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಅಲ್ಲಮ ಪ್ರಭು ಜನ್ಮಸ್ಥಳ ಅಭಿವೃದ್ಧಿಗೆ ಕೇಂದ್ರದ ಪುರಾತತ್ವ ಇಲಾಖೆ ಒಪ್ಪಿಗೆ ನೀಡಿದ್ದು, 4 ಕೋಟಿ ರೂ. ವೆಚ್ಚದಲ್ಲಿಸರಕಾರದಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಶಿವಕಾಶಿಯ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸಾವು

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement