ಕೊಪ್ಪಳ: ಗಂಗಾವತಿ ನಗರದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 300 ಚೀಲಗಳ ನಕಲಿ ರಸಗೊಬ್ಬರ ಪತ್ತೆಯಾಗಿದ್ದು, ಕೃಷಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಗರದ ಎಪಿಎಂಸಿ ಆವರಣದಲ್ಲಿರುವ ಮಳಿಗೆಯಲ್ಲಿ ಅಂಗಡಿ ಆರಂಭ ಮಾಡಿಕೊಂಡು ಕೆಲ ವ್ಯಕ್ತಿಗಳು ನಕಲಿ ರಸಗೊಬ್ಬರಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ನಾನಾ ಬಗೆಯ ಬ್ರಾಂಡ್ಗಳ ಚೀಲಗಳಲ್ಲಿ ನಕಲಿ ರಸಗೊಬ್ಬರವನ್ನು ತುಂಬಿಕೊಂಡು ಸಿಂಧನೂರ, ಮಸ್ಕಿ ತಾಲೂಕುಗಳ ಕಡೆಗೆ ಸಾಗಾಟ ಮಾಡಲಾಗುತ್ತಿದ್ದು, ಲಾರಿಯನ್ನು ಪೊಲೀಸರು ತಪಾಸಣೆ ನಡೆಸಿದ ವೇಳೆಯಲ್ಲಿ ಪ್ರಕರಣ ಬಯಲಿಗೆ ಬಂದಿದೆ.
ಬೇರೆಬೇರೆ ಹೆರಿನಲ್ಲಿ ರಸಗೊಬ್ಬರವನ್ನು ಲಾರಿಯಲ್ಲಿ ತುಂಬಿಕೊಂಡು ಮಾರಾಟ ಮಾಡಲಾಗುತ್ತಿತ್ತು. ಅಂಗಡಿಯನ್ನು ಕೂಡ ಪರಿಶೀಲನೆಯನ್ನು ನಡೆಸಲಾಗಿದೆ. ಆರೋಪಿಗಳು ನಾಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ