ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್ ಖಾನ್ ಬಂಧಿಸಿದ ಅಧಿಕಾರಿ ವಿರುದ್ಧ ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣ ದಾಖಲು

ನವದೆಹಲಿ: ಎರಡು ವರ್ಷಗಳ ಹಿಂದೆ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಬಂಧಿಸಿದ್ದ ಮಾದಕ ದ್ರವ್ಯ ನಿಗ್ರಹ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.
ಸಮೀರ್‌ ವಾಂಖೆಡೆ ಮತ್ತು ಇತರರು ಆಪಾದಿತ ಮಾದಕವಸ್ತು ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು ₹ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಮುಂಬೈ, ದೆಹಲಿ, ರಾಂಚಿ ಮತ್ತು ಕಾನ್ಪುರದಲ್ಲಿ ಪ್ರಮುಖ ತನಿಖಾ ಸಂಸ್ಥೆ ಶೋಧ ನಡೆಸಿದೆ.
ಸಮೀರ್‌ ವಾಂಖೆಡೆ ಅವರು ಮತ್ತು ಇತರರು 2021 ರಲ್ಲಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ಮಾಡಿದಾಗ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಥವಾ ಎನ್‌ಸಿಬಿ(NCB)ಯ ಮುಂಬೈ ವಲಯ ಮುಖ್ಯಸ್ಥರಾಗಿದ್ದರು. ನಾಲ್ಕು ವಾರಗಳ ಕಾಲ ಜೈಲಿನಲ್ಲಿ ಕಳೆದಿದ್ದ ಆರ್ಯನ್ ಖಾನ್ ಅವರನ್ನು “ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆ”ಯಿಂದಾಗಿ 2022ರ ಮೇ ತಿಂಗಳಲ್ಲಿ ಡ್ರಗ್ಸ್ ವಿರೋಧಿ ಸಂಸ್ಥೆ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತು.
ಈ ಹಿಂದೆ, ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಹೇಳಿಕೊಂಡಿದೆ. ವಾಂಖೆಡೆ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಯಿತು.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement