2023-24ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಶಾಲೆ ಆರಂಭ ಯಾವಾಗ..? ಮಧ್ಯಂತರ-ಬೇಸಿಗೆ ರಜೆ ಯಾವಾಗ? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ಮೇ 28 ರಂದು ಮುಕ್ತಾಯಗೊಳ್ಳಲಿದ್ದು, ಮೇ 29ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಅದರ ಪ್ರಕಾರ, ಅಕ್ಟೋಬರ್‌ 8ರಿಂದ ದಸರಾ ಹಾಗೂ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ.
ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ವಾರ್ಷಿಕ, ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು, ಪರೀಕ್ಷೆ ಹಾಗೂ ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಮಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
29-05-2023ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿತ್ತು. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆ ಜಾರಿಗೊಳಿಸಲು ಅನುಕೂಲವಾಗುವಂತೆ ಶೈಕ್ಷಣಿಕ ಅವಧಿಗಳು, ರಜಾ ದಿನಗಳು ಮತ್ತು ವಾರ್ಷಿಕ ಕಾರ್ಯಸೂಚಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
29-05-2023 ರಿಂದ 07-10-2023ರವರೆಗೆ ಮೊದಲನೇ ಅವಧಿಗೆ ಶಾಲಾ ಕರ್ತವ್ಯ ದಿನಗಳನ್ನು ನಿಗದಿ ಮಾಡಲಾಗಿದೆ.
25-10-2023ರಿಂದ 10-04-2024ರ ವರೆಗೆ ಎರಡನೇ ಅವಧಿಗೆ ಶಾಲಾ ಕರ್ತವ್ಯದ ದಿನಗಳನ್ನು ನಿಗದಿ ಮಾಡಲಾಗಿದೆ.
ದಸರಾ ರಜೆ-08-10-2023ರಿಂದ ದಿನಾಂಕ 24-10-203ರವರೆಗೆ ನೀಡಲಾಗಿದೆ.
ಬೇಸಿಗೆ ರಜೆ-11-04-2024ರಿಂದ 28-05-2024ರವರೆಗೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement