ವಯನಾಡಿನಿಂದಲ್ಲ, ನನ್ನ ವಿರುದ್ಧ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಿ: ರಾಹುಲ್ ಗಾಂಧಿಗೆ ಸವಾಲು ಹಾಕಿದ ಓವೈಸಿ

ಹೈದರಾಬಾದ್‌ : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ರಾಹುಲ್ ಗಾಂಧಿಗೆ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ.
ಭಾನುವಾರ (ಸೆಪ್ಟೆಂಬರ್ 24) ಹೈದರಾಬಾದಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಹೈದರಾಬಾದ್‌ನಿಂದ ಸ್ಪರ್ಧಿಸಿ ವಯನಾಡಿನಿಂದ ಅಲ್ಲ ಎಂದು ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ.
ರಾಹುಲ್‌ ಗಾಂಧಿಗೆ ಬಹಿರಂಗ ಸವಾಲು ಹಾಕಿದ ಓವೈಸಿ, ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುವ ಬದಲು ಚುನಾವಣಾ ಮೈದಾನಕ್ಕೆ ಬಂದು ನನ್ನ ವಿರುದ್ಧ ಸ್ಪರ್ಧಿಸಿ. ನೀವು ಸಿದ್ಧರಿದ್ದೀರಿ ಎಂದಾದರೆ ಅದಕ್ಕೆ ನಾನೂ ನಾನು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.
ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತಿದ್ದೀರಿ, ಮೈದಾನಕ್ಕೆ ಬಂದು ನನ್ನ ವಿರುದ್ಧ ಹೋರಾಡಿ. ಕಾಂಗ್ರೆಸ್‌ನಿಂದ ಬಂದವರು ಸಾಕಷ್ಟು ಮಾತುಗಳನ್ನು ಆಡುತ್ತಾರೆ, ಆದರೆ ಹೈದರಾಬಾದ್‌ನಲ್ಲಿನ ಸಮಸ್ಯೆಗಳಿಗೆ ಕಾಂಗ್ರೆಸ್ ಕಾರಣ ಎಂದು ನಾನು ತೆಲಂಗಾಣ ಜನರಿಗೆ ಮನವಿ ಮಾಡಲು ಬಯಸುತ್ತೇನೆ. ಕಾಂಗ್ರೆಸ್ ಆಡಳಿತದಲ್ಲಿ ಬಾಬರಿ ಮಸೀದಿ ಮತ್ತು ಸೆಕ್ರೆಟರಿಯೇಟ್‌ನ ಮಸೀದಿಯನ್ನು ಕೆಡವಲಾಯಿತು…” ಎಂದು ಓವೈಸಿ ಹೇಳಿದರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ಬಿಜೆಪಿ ವಿರುದ್ಧ ವಾಗ್ದಾಳಿ…
ಬಿಎಸ್‌ಪಿ ಶಾಸಕ ಡ್ಯಾನಿಶ್ ಅಲಿ ವಿರುದ್ಧ ಪಕ್ಷದ ಸಂಸದ ರಮೇಶ್ ಬಿಧುರಿ ಅವರ ಆಕ್ಷೇಪಾರ್ಹ ಹೇಳಿಕೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಸಂಸತ್ತಿನಲ್ಲಿ ಮುಸ್ಲಿಮರ ಗುಂಪು ಹತ್ಯೆ ನಡೆಯುವ ದಿನ ದೂರವಿಲ್ಲ” ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮೌನದ ಬಗ್ಗೆ ಪ್ರಶ್ನಿಸಿದ ಅವರು, ಬಿಜೆಪಿ ಸಂಸದರೊಬ್ಬರು ಮುಸ್ಲಿಂ ಸಂಸದರನ್ನು ಸಂಸತ್ತಿನಲ್ಲಿ ನಿಂದಿಸುವುದನ್ನು ನಾವು ನೋಡುತ್ತೇವೆ. ಅವರು ಸಂಸತ್ತಿನಲ್ಲಿ ಇದನ್ನೆಲ್ಲಾ ಹೇಳಬಾರದಿತ್ತು ಎಂದು ಜನರು ಹೇಳುತ್ತಿದ್ದಾರೆ, ದೇಶದ ಸಂಸತ್ತಿನಲ್ಲಿ ಮುಸಲ್ಮಾನರ ಮೇಲೆ ಗುಂಪು ಹಲ್ಲೆ ನಡೆಯುವ ದಿನ ದೂರವಿಲ್ಲ… ಎಲ್ಲಿದೆ ನಿಮ್ಮ ‘ಸಬಕಾ ಸಾಥ್‌ , ಸಬಕಾ ವಿಕಾಸ್?’ ಪ್ರಧಾನಿ ಈ ಬಗ್ಗೆ ಒಂದು ಮಾತನ್ನೂ ಹೇಳುವುದಿಲ್ಲ…” ಎಂದು ಓವೈಸಿ ವಾಗ್ದಾಳಿ ನಡೆಸಿದರು.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಬಿಧುರಿ ಅವರು ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು, ನಂತರ ಸದನದ ದಾಖಲೆಗಳಿಂದ ಅದನ್ನು ತೆಗೆದುಹಾಕಲಾಯಿತು. ಅವರ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಹೇಳಿಕೆಗೆ ಎಚ್ಚರಿಕೆ ನೀಡಿದ್ದರೂ, ಅವರನ್ನು ಸದನದಿಂದ ಅಮಾನತುಗೊಳಿಸಲಿಲ್ಲ. ಘಟನೆಯ ನಂತರ ಬಿಜೆಪಿ ತನ್ನ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದೆ.

ಪ್ರಮುಖ ಸುದ್ದಿ :-   ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement