ದ್ವಿತೀಯ ಪಿಯು ಉತ್ತೀರ್ಣರೆಲ್ಲ ಸಿಇಟಿ ಬರೆಯಬಹುದು, ಅಕ್ಟೋಬರ್ ಮೊದಲ ವಾರ ಪದವಿ ತರಗತಿಗೆ ದಾಖಲಾತಿ

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿ ಪಾಸಾದವರೆಲ್ಲರೂ ಸಿಇಟಿ ಬರೆಯಬಹುದು, ಅಕ್ಟೋಬರ್‌ನಿಂದ ಪದವಿ ತರಗತಿಗಳ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಬಿಎಸ್ಸಿ ಕೋರ್ಸ್‌ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ​ ತಿಳಿಸಿದ್ದಾರೆ.
2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಎಲ್ಲ ಕುಲಪತಿಗಳ ಜತೆ ಬೆಂಗಳೂರಿನಲ್ಲಿ ಮಂಗಳವಾರ ವರ್ಚುಯಲ್‌ ಚರ್ಚೆ ನಡೆಸಿದ ನಂತರ ಡಾ. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಅಕ್ಟೋಬರ್‌ನಿಂದ ಪದವಿ ತರಗತಿಗಳ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಎಲ್ಲ ವಿವಿಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆದಿದೆ. ಪದವಿ ಹಂತದ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ನಡೆಸಬೇಕು. ಮೊದಲ ವರ್ಷದ ಪದವಿಗೆ ಅಕ್ಟೋಬರ್‌ ಮೊದಲ ವಾರದಿಂದಲೇ ದಾಖಲಾತಿ ಆರಂಭಕ್ಕೆ ಸೂಚನೆ ನೀಡಲಾಗಿದೆ. ಬಿಎಸ್ಸಿ ಕೋರ್ಸ್‌ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ ಎಂದು ಅವರು ಮಾಹಿತಿ ನೀಡಿದರು.
ಬಿಎಸ್ಸಿ ಕೋರ್ಸ್‌ಗೆ ಈ ಬಾರಿ ಸಿಇಟಿ ಅಂಕ ಪರಿಗಣಿಸುವುದಿಲ್ಲ. ಯಾವ ವಿವಿಗಳಲ್ಲಿ ಪದವಿ ಕೋರ್ಸ್ ಗಳಿಗೆ ಪರೀಕ್ಷೆ ನಡೆದಿಲ್ಲವೋ ಅವುಗಳ ಮಾಹಿತಿ ಪಡೆದುಕೊಂಡಿದ್ದೇವೆ. ಕೊವಿಡ್​ ಕಾರಣಕ್ಕೆ ಈ ವರ್ಷ ಪಿಯುಸಿಯ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ. ಹೀಗಾಗಿ ವಿವಿಧ ಕೋರ್ಸ್​​ಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿಶ್ವವಿದ್ಯಾಲಯಗಳಿಗೆ ಇದೊಂದು ಅವಕಾಶವಾಗಿದ್ದು, 4 ವರ್ಷದ ಪದವಿ ತರಗತಿ ಆರಂಭ ಮಾಡುವ ಮೂಲಕ ಪದವಿ ವ್ಯಾಸಂಗದ ಅಭಿಲಾಶೆಯುಳ್ಳವರನ್ನು ಸೇರಿಸಿಕೊಳ್ಳಿ ಎಂದು ಡಾ.ಅಶ್ವತ್ಥ ನಾರಾಯಣ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.
ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಸೂಕ್ತವಾದ ʼಕಾರ್ಯ ಚೌಕಟ್ಟುʼ ರೂಪಿಸಲು ವಿಷಯವಾರು ಸಮಿತಿ ರಚನೆ ಮಾಡುವಂತೆಯೂ ಕುಲಪತಿಗಳಿಗೆ ಸೂಚನೆ ನೀಡಲಾಗಿದ್ದು, ಜುಲೈ 15ರೊಳಗೆ ಈ ಸಮಿತಿಗಳು ವರದಿಗಳನ್ನು ಸಲ್ಲಿಸಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.
ಏಕೀಕೃತ ವಿವಿ- ಕಾಲೇಜು ನಿರ್ವಹಣಾ ವ್ಯವಸ್ಥೆ
ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ವಿದ್ಯಾಭ್ಯಾಸ ನಡೆಸುವ ನಿಟ್ಟಿನಲ್ಲಿ ಎಲ್ಲರಿಗೂ ಟ್ಯಾಬ್‌ ನೀಡಲಾಗುತ್ತಿದೆ ಸ್ಮಾರ್ಟ್‌ ಕ್ಲಾಸ್‌ಗಳು ಶುರುವಾಗುತ್ತಿವೆ. ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಏಕೀಕೃತ ವಿವಿ– ಕಾಲೇಜು ನಿರ್ವಹಣಾ ವ್ಯವಸ್ಥೆ ಅನುಸಂಧಾನಗೊಳಿಸಲಾಗುವುದು. ಪ್ರತ್ಯೇಕ ಡಿಜಿಟಲ್‌ ಪೋರ್ಟಲ್‌ ಸಿದ್ಧವಾಗುತ್ತಿದ್ದು, ಅದನ್ನು ಇ–ಗವರ್ನೆನ್ಸ್‌ ಇಲಾಖೆ ಅಭಿವೃದ್ಧಿಪಡಿಸುತ್ತಿದೆ. ಜೂನ್‌ 25ರಿಂದ ಪ್ರಾಯೋಗಿಕವಾಗಿ ಇದನ್ನು ಬಳಸಲು ಸರಕಾರದಿಂದ ಅನುಮತಿ ದೊರೆತಿದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳು ಇನ್ನು ಮುಂದೆ ಇ–ಆಫೀಸ್‌ ಮೂಲಕವೇ ನಡೆಯುತ್ತವೆ. ಯಾವುದೇ ಕಾಗದ ಪತ್ರಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿದರು.
ಕೋವಿಡ್‌ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸುಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿವಿಗಳಿಗೆ ಇದೊಂದು ಸುವರ್ಣಾವಕಾಶ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭ ಮಾಡುವ ಮೂಲಕ ವಿವಿಗಳು ಪದವಿ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು..
ನಮ್ಮನ್ನು ಕಾಡುತ್ತಿರುವ ಕೊರೊನಾ ವೈರಸ್‌ ಎಷ್ಟು ಕಾಲ ಇರುತ್ತದೋ ಗೊತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮತ್ತು ಆಫ್ ಲೈನ್‌ ನಲ್ಲಿ ಕಲಿಯಲು ಅವಕಾಶ ಇರಲೇಬೇಕು. ಅದಕ್ಕೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳು ವಿದ್ಯಾಸಂಸ್ಥೆಗಳಲ್ಲಿ ಇರಬೇಕು. ಡಿಜಿಟಲ್‌ನಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವರ್ಚಯುಲ್‌ ಮೂಲಕ ಬೋಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement