ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜೊತೆ ಖುದ್ದು ಮಾತಾಡಿದ್ದೇನೆ ಹಾಗೂ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯದವರ ಜೊತೆ ಮಾತನಾಡಿದ ಅವರು, ಯಾರಿಂದಲಾದರೂ ಬೆದರಿಕೆ ಕರೆ ಬಂದಿದೆಯಾ ಎಂದು ಸಿದ್ದರಾಮಯ್ಯ ಅವರನ್ನೇ ಕೇಳಿದ್ದೇನೆ. ಒಂದು ವೇಳೆ ಬೆದರಿಕೆ ಕರೆ ಬಂದರೆ ತಕ್ಷಣವೇ ಮಾಹಿತಿ ನೀಡುವಂತೆ ಹೇಳಿದ್ದೇನೆ ಎಂದರು.

ಘಟನೆ ಬಗ್ಗೆ ಡಿಜಿ ಮತ್ತು ಐಜಿಪಿಯಿಂದ ಮಾಹಿತಿಯೂ ಪಡೆದಿದ್ದೇನೆ. ತಕ್ಷಣದಿಂದಲೇ ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಲು ಅವರಿಗೆ ಸೂಚಿಸಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ತಪ್ಪು ಹಾಗೂ ಗದ್ದಲ ಎರಡು ಕಡೆಯಿಂದಲೂ ಆಗುತ್ತಿವೆ. ಯಾರೇ ಪ್ರಚೋದನಾಕಾರಿ ಹೇಳಿಕೆ ನೀಡಿದರೂ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಯಾರೇ ಆದರೂ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಜಿಲ್ಲೆಗಳಲ್ಲಿ ಇಂಥ ಘಟನೆ ಮರುಕಳಿಸಿದರೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement