ಮಿಜೋರಾಂ ವಿಧಾನಸಭಾ ಚುನಾವಣೆ ಮತ ಎಣಿಕೆ : ಆಡಳಿತಾರೂಢ ಎಂಎನ್‌ಎಫ್ ಪಕ್ಷಕ್ಕೆ ಭಾರೀ ಹಿನ್ನಡೆ

ಐಜ್ವಾಲ್: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದ ರಾಜ್ಯಗಳಲ್ಲಿ ಒಂದಾಗಿದ್ದ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆದದ್ದು, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಹಿಂದೆ ಬಿದ್ದಿದೆ. ಹಾಗೂ ವಿಪಕ್ಷವಾದ ಜೋರಾಮ್ ಪೀಪಲ್ಸ್ ಮುನ್ನಡೆ ಸಾಧಿಸಿದೆ.
ಈವರೆಗಿನ ಟ್ರೆಂಡ್‌ಗಳಲ್ಲಿ ಜೆಡ್‌ಪಿಎಂ 29 ಸ್ಥಾನಗಳಲ್ಲಿ, ಎಂಎನ್‌ಎಫ್ 7, ಬಿಜೆಪಿ 3 ಮತ್ತು ಕಾಂಗ್ರೆಸ್ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿದ್ದು, ಶೇ.80.66ರಷ್ಟು ಮತದಾನವಾಗಿದೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಇಂದು ಸೋಮವಾರ ಮಿಜೋರಾಂನಲ್ಲಿ ಮತ ಎಣಿಕೆ ನಡೆಯುತ್ತಿದೆ.
ಮಿಜೋರಾಂನಲ್ಲಿ ಜನರಿಗೆ ಡಿಸೆಂಬರ್ 3ರ ಭಾನುವಾರ ವಿಶೇಷ ದಿನವಾಗಿದ್ದರಿಂದ ಮತ ಎಣಿಕೆ ದಿನಾಂಕವನ್ನು ಒಂದು ದಿನ ಮುಂದೂಡಲಾಗಿತ್ತು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement