ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ. ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ … Continued

ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued

ವಕ್ಫ್ ತಿದ್ದುಪಡಿ ಕಾಯಿದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯಿದೆ- 2025ಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮಧ್ಯಂತರ ಪರಿಹಾರದ ಕುರಿತು ತನ್ನ ಆದೇಶ ಕಾಯ್ದಿರಿಸುವ ಮೊದಲು ಮೂರು ದಿನಗಳ ಕಾಲ ಎಲ್ಲ ಪಕ್ಷಕಾರರ … Continued

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ … Continued

ಸಲ್ಮಾನ್ ಖಾನ್ ಮನೆಗೆ ಅಕ್ರಮ ಪ್ರವೇಶ : ಇಬ್ಬರ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಂಗಳವಾರ ಮತ್ತು ಬುಧವಾರ ಬಾಂದ್ರಾ (ಪಶ್ಚಿಮ) ದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಲು ಆರೋಪಿಗಳನ್ನು ಪ್ರತ್ಯೇಕವಾಗಿ ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿಯನ್ನು ಜಿತೇಂದ್ರಕುಮಾರ … Continued

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ

ನವದೆಹಲಿ: ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, … Continued

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ

ಬೆಂಗಳೂರು: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ಡಾಕ್ಟರ್ ಡೆತ್‌ ! ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ…!!

ನವದೆಹಲಿ: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ … Continued

ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, … Continued