ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ. ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ … Continued

ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ನವದೆಹಲಿ: ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಒಳಗೊಂಡಿರುವ ಭಾರತದ ದಕ್ಷಿಣ ಪ್ರದೇಶವು ಹತ್ತು ವರ್ಷಗಳ ಸರಾಸರಿಗೆ ಹೋಲಿಸಿದರೆ ಜಲಾಶಯದ ಸಾಮರ್ಥ್ಯದ ಕೇವಲ 17 ಪ್ರತಿಶತದಷ್ಟು ಮಾತ್ರ ನೀರಿನ ಸಂಗ್ರಹವಿದ್ದು, ಗಮನಾರ್ಹವಾಗಿ ಕಡಿಮೆಯಿದೆ ಎಂದು ಕೇಂದ್ರ ಜಲ ಆಯೋಗ(CWC)ದ ಇತ್ತೀಚಿನ ಬುಲೆಟಿನ್ ತಿಳಿಸಿದೆ. ಭಾರತದ ವಿವಿಧ ಪ್ರದೇಶಗಳಲ್ಲಿನ ಜಲಾಶಯದ ಶೇಖರಣಾ ಮಟ್ಟಗಳಿಗೆ ಸಂಬಂಧಿಸಿದಂತೆ … Continued

ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್‌ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್‌ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued

ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ನವದೆಹಲಿ: ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳಲ್ಲಿ ಸರಿಯಾಗಿ ಉತ್ತರ ಬರೆಯದೆ “ಜೈ ಶ್ರೀ ರಾಮ” ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದರೂ ಪರೀಕ್ಷೆಯಲ್ಲಿ ಅವರನ್ನು ಉತ್ತೀರ್ಣ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿ ಪ್ರಕಾರ, ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ … Continued

ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

ನವದೆಹಲಿ : 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಶೇ.63ರಷ್ಟು ಮತದಾನವಾಗಿದೆ. ಸಂಜೆ 6ರ ನಂತರವೂ ಹಲವಡೆ ಮತದಾರರು ಮತದಾನ ಕೇಂದ್ರದಲ್ಲಿ ಸರತಿಯ ಸಾಲಿನಲ್ಲಿ ನಿಂತಿದ್ದು ಹೀಗಾಗಿ ಅಂತಿಮ ಮತದಾನದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಬಹುದಾಗಿದೆ. ಕೇರಳದಲ್ಲಿ 20, ಕರ್ನಾಟಕದಲ್ಲಿ 14, … Continued

ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ…

ಬೆಂಗಳೂರು:  ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ಪೂರ್ಣಗೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಮೂಲಸೌಕರ್ಯ ನೀಡದೇ ಇದ್ದುದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮತಯಂತ್ರಕ್ಕೆ ಹಾನಿ ಮಾಡಿದ್ದು ಹೊರತುಪಡಿಸಿದರೆ ರಾಜ್ಯದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಈ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಿತು. ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು … Continued