14,000 ಉದ್ಯೋಗಗಳ ಕಡಿತಕ್ಕೆ ನೋಕಿಯಾ ನಿರ್ಧಾರ

ಫಿನ್‌ಲ್ಯಾಂಡ್ ಮೂಲದ ಮೊಬೈಲ್ ಕಂಪನಿ ನೋಕಿಯಾ (Nokia) ಮಾರಾಟ ಕುಸಿತ ಮತ್ತು 5G ಸಲಕರಣೆಗಳ ಬೇಡಿಕೆಯ ನಡುವೆ 9,000 ರಿಂದ 14,000 ಉದ್ಯೋಗಗಳನ್ನು ಕಡಿತಗೊಳಿಸಲು ಯೋಜಿಸುತ್ತಿದೆ ಎಂದು ಗುರುವಾರ ತಿಳಿಸಿದೆ. ಈ ಕಡಿತಗಳು ಕಂಪನಿಯ ಪ್ರಸ್ತುತ ಜಾಗತಿಕ 86,000 ಉದ್ಯೋಗಿಗಳ ಸುಮಾರು 16% ರಷ್ಟು ಜನರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ವಜಾಗೊಳಿಸುವಿಕೆಯು 2024 ರಲ್ಲಿ … Continued

ಯುಜಿಸಿಯಿಂದ ವಾಟ್ಸಪ್ ಚಾನೆಲ್ ಆರಂಭ

ನವದೆಹಲಿ: ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರೊಂದಿಗೆ ಸಂಪರ್ಕದಲ್ಲಿರಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಯುಜಿಸಿ ಇಂಡಿಯಾ ವಾಟ್ಸಾಪ್ ಚಾನೆಲ್ ಅನ್ನು ಪ್ರಾರಂಭಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳು (HIE ಗಳು), ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಇತರರು ವಾಟ್ಸಾಪ್ ಚಾನೆಲ್ ಮೂಲಕ ಸಂಪರ್ಕದಲ್ಲಿರಲು ಈ ಉಪಕ್ರಮವನ್ನು ಪ್ರಾರಂಭಿಸಲಾಗಿದೆ. ಒಂದೇ ಕ್ಲಿಕ್‌ ಮೂಲಕ ತಮ್ಮ ಬೆರಳ ತುದಿಯಲ್ಲಿ ಅಧಿಕೃತ ಮತ್ತು … Continued

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂಗೆ ಕೊಕ್‌ ; ಮಾಜಿ ಸಿಎಂ ಕುಮಾರಸ್ವಾಮಿಗೆ ಪಟ್ಟ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಮುಕ್ತಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಹಿಂದಿನ ಅಧ್ಯಕ್ಷರ ಹೇಳಿಕೆ ಬಗ್ಗೆ … Continued

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿ.ಕೆ. ಶಿವಕುಮಾರಗೆ ಮತ್ತೆ ಸಂಕಷ್ಟದ ಭೀತಿ : ಸಿಬಿಐ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸಂಕಷ್ಟ ಎದುರಾಗಿದ್ದು, ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಹಸಿರು ನಿಶಾನೆ ತೋರಿದೆ. ಶಿವಕುಮಾರ ಹೈಕೋರ್ಟ್‌ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದಲ್ಲದೇ ಸಿಬಿಐ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ. ಅಲ್ಲದೆ, … Continued

ಗಾಜಾ ಆಸ್ಪತ್ರೆ ಮೇಲಿನ ದಾಳಿಗೂ, ನಮಗೂ ಸಂಬಂಧವಿಲ್ಲ: ಸಾಕ್ಷ್ಯ ಬಿಡುಗಡೆ ಮಾಡಿದ ಇಸ್ರೇಲ್

500 ಸಾವಿಗೆ ಕಾರಣವಾದ ಗಾಜಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ನಡೆದ ದಾಳಿಯ ಬಗ್ಗೆ ಹಮಾಸ್-ಇಸ್ರೇಲ್‌ ಪರಸ್ಪರ ಆರೋಪ-ಪ್ರತಯಾರೋ ಮಾಡುತ್ತಿರುವ ಬೆನ್ನಲ್ಲೇ, ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಾವು ಹೇಳಿರುವುದಕ್ಕೆ ಇಸ್ರೇಲ್‌ ಸಾಕ್ಷ್ಯ ತೋರಿಸಿದೆ. ಆಸ್ಪತ್ರೆಯಲ್ಲಿ ವೈಮಾನಿಕ ದಾಳಿಯಿಂದ ಸ್ಫೋಟ ಸಂಭವಿಸಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿರುವ ಇಸ್ರೇಲ್, ಇಸ್ಲಾಮಿ ಜಿಹಾದ್‌ ಗುಂಪು … Continued

ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಲು ಆದೇಶ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧ, ವಿಕಾಸಸೌಧ, … Continued

ವೀಟೋ ಮಾಡಿದ ಅಮೆರಿಕ : ಇಸ್ರೇಲ್-ಪ್ಯಾಲೆಸ್ತೈನ್ ಸಂಘರ್ಷದ ನಿರ್ಣಯ ಅಂಗೀಕರಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ವಿಫಲ

ವಿಶ್ವಸಂಸ್ಥೆ : ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ “ಮಾನವೀಯ ವಿರಾಮ”ಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಅಮೆರಿಕ ಬುಧವಾರ ವೀಟೋ ಮಾಡಿದೆ, ಏಕೆಂದರೆ ನಿರ್ಣಯವು ತನ್ನನ್ನು ತಾನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕನ್ನು ಗೌರವಿಸುವುದಿಲ್ಲ ಎಂದು ಅಮೆರಿಕ ರಾಯಭಾರಿ ಹೇಳಿದ್ದಾರೆ. 15 ಕೌನ್ಸಿಲ್ ಸದಸ್ಯರಲ್ಲಿ ಹನ್ನೆರಡು ಸದಸ್ಯರು ಬ್ರೆಜಿಲ್ ಮಂಡಿಸಿದ ನಿರ್ಣಯದ ಪರವಾಗಿ ಮತ ಚಲಾಯಿಸಿದರು. ಆದರೆ … Continued

ವೀಡಿಯೊ…| ಬೆಂಗಳೂರಿನ ಕಟ್ಟಡದಲ್ಲಿ ಸ್ಫೋಟ, ಬೆಂಕಿ ಅನಾಹುತ ; 4 ಮಹಡಿ ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು : ಬೆಂಗಳೂರಿನ ಕೋರಮಂಗಲದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನಾಲ್ಕರಿಂದ ಐದು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಟ್ಟಡದ ಮೇಲಿನ ಮಹಡಿಯಲ್ಲಿ ಕೆಫೆ ಇತ್ತು ಮತ್ತು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ.ಸ್ವಲ್ಪ ಸಮಯದ ನಂತರ, ಒಬ್ಬ ವ್ಯಕ್ತಿ ನಾಲ್ಕು ಮಹಡಿ … Continued

ನವಂಬರ್‌ 1ರಿಂದ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

ಶಿರಸಿ: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನವಂಬರ್‌ 1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ 766(E)ಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ. ಬುಧವಾರ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್. ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆಗಳು … Continued

15 ವರ್ಷಗಳ ಹಿಂದಿನ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದ ಕೋರ್ಟ್

ನವದೆಹಲಿ: ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಅಕ್ಟೋಬರ್ 26ರಂದು ಪ್ರಕಟಿಸಲಿದೆ. 2008ರ ಸೆಪ್ಟೆಂಬರ್ 30ರಂದು ಸೌಮ್ಯ ತನ್ನ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಚಲಿಸುತ್ತಿದ್ದ ಕಾರಿನಲ್ಲಿ ಅವರ ಮೇಲೆ ಗುಂಡು ಹಾರಿಸಲಾಯಿತು. … Continued