ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ. ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ … Continued

ಆಗಸ್ಟ್ ತಿಂಗಳಲ್ಲಿ ಮಳೆ ಮೇಲೆ ʼಎಲ್ ನಿನೊʼ ಪರಿಣಾಮ ಬೀರಬಹುದು: ಐಎಂಡಿ

ನವದೆಹಲಿ : ಜುಲೈನಲ್ಲಿ ಅಧಿಕ ಮಳೆಯ ನಂತರ ಭಾರತವು ಮಾನ್ಸೂನ್ ಋತುವಿನ ದ್ವಿತೀಯಾರ್ಧದಲ್ಲಿ ಸಾಮಾನ್ಯ ಮಳೆಯನ್ನು ದಾಖಲಿಸುವ ನಿರೀಕ್ಷೆಯಿದೆ. ಎಲ್ ನಿನೋ ಮತ್ತು ಇತರ ಪ್ರತಿಕೂಲ ಪರಿಸ್ಥಿತಿಗಳು ಆಗಸ್ಟ್‌ ತಿಂಗಳಲ್ಲಿ ಮಳೆಯನ್ನು ನಿಗ್ರಹಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ಮಾನ್ಸೂನ್ ಋತುವಿನಲ್ಲಿ ಮಳೆಯ ಶೇಕಡ 30 ರಷ್ಟು ಮಳೆ ಆಗಸ್ಟ್ ತಿಂಗಳಲ್ಲಿ … Continued

ಹರಿಯಾಣದ ನೂಹ್‌ನಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಹಿಂಸಾಚಾರ, ಇಬ್ಬರು ಗೃಹರಕ್ಷಕರು ಸಾವು, 10 ಪೊಲೀಸರಿಗೆ ಗಾಯ : ಇಂಟರ್ನೆಟ್ ಸ್ಥಗಿತ

ಮೇವಾತ್‌ : ಹರಿಯಾಣದ ಮೇವಾತ್ ಪ್ರದೇಶದಲ್ಲಿ ಸೋಮವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕರು ಮೃತಪಟ್ಟಿದ್ದು, 10 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರದಿಂದಾಗಿ ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು … Continued

5 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ವೀಕ್ಷಕರ ನೇಮಕ

ನವದೆಹಲಿ: ಕಾಂಗ್ರೆಸ್ ಹೈ ಕಮಾಂಡ್ ಸೋಮವಾರ ಚುನಾವಣೆ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ರಾಜಸ್ಥಾನಕ್ಕೆ ಮಧುಸೂಧನ ಮಿಸ್ತ್ರಿ ಅವರನ್ನು ಹಿರಿಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪಕ್ಷದ ಪ್ರಧಾನ … Continued

ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಬಿಜೆಪಿ ಅವಧಿಯ ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಲಾಗಿದೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಈ ಬಗ್ಗೆ … Continued

ಬಹುಮುಖ ವ್ಯಕ್ತಿತ್ವದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ

(ಆಗಸ್ಟ್‌ ೧ರಂದು ಡಾ. ಪ್ರಭಾಕರ ಕೋರೆ ಅವರ ೭೬ ನೇ ಜನ್ಮದಿನವಾಗಿದ್ದು, ಆ ನಿಮಿತ್ತ ಲೇಖನ) ಜ್ಞಾನ ದೀವಿಗೆ ಇಲ್ಲಿ ಲಕ್ಷಾಂತರ ಮಂದಿಯ ಬಾಳು ಬೆಳಗಿದೆ. ಏಳು ಶಿಕ್ಷಕರಿಂದ ೧೯೧೬ ರಲ್ಲಿ ಆರಂಭವಾದ ಪುಟ್ಟ ಕೆಎಲ್‌ಇ ಸಂಸ್ಥೆ, ಇಂದು ಹೆಮ್ಮರವಾಗಿ ಬೆಳೆದಿದ್ದು, ರಾಷ್ಟ್ರಮಾತ್ರವಲ್ಲ. ವಿದೇಶಗಳ ವಿದ್ಯಾಸಕ್ತರ ಜ್ಞಾನದಾಹ ಇಂಗಿಸುವಲ್ಲಿ ಯಶಸ್ವಿಯಾಗಿದೆ. ಸಾಮಾನ್ಯ ಶಿಕ್ಷಣ, ತಂತ್ರಜ್ಞಾನ, ಮಾಹಿತಿ … Continued

ತನ್ನ ಕಪಾಳಕ್ಕೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಪುರಸಭೆ ಸದಸ್ಯ : ಹಾಗೆ ಮಾಡಿದ್ದಕ್ಕೆ ಕಾರಣ ನೀಡಿದ ಕೌನ್ಸಿಲರ್‌ | ವೀಕ್ಷಿಸಿ

ಅನಕಾಪಲ್ಲಿ: ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾದ ಕಾರಣಕ್ಕೆ ಅನಕಾಪಲ್ಲಿ ಜಿಲ್ಲೆಯ ಕೌನ್ಸಿಲರ್‌ ಒಬ್ಬರು ಸೋಮವಾರ ಚಪ್ಪಲಿಯಿಂದ ತಮಗೆ ತಾವೇ ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ..! ನರಸೀಪಟ್ಟಣ ಪುರಸಭೆಯ (ವಾರ್ಡ್ 20) ಕೌನ್ಸಿಲರ್ ಮುಲಪರ್ತಿ ರಾಮರಾಜು ಅವರು ಕೌನ್ಸಿಲ್ ಸಭೆಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ಕೃತ್ಯದ ವೀಡಿಯೊ ವೈರಲ್ ಆಗಿದೆ. ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಿ … Continued

ಬೇರೆಡೆಯೂ ಇಂತಹ ಘಟನೆಗಳು ನಡೆದಿವೆ ಎಂದು ಮಣಿಪುರದ ಮಹಿಳೆಯರ ವಿರುದ್ಧದ ಘಟನೆ ಸಮರ್ಥಿಸಲಾಗದು: ಸುಪ್ರೀಂ ಕೋರ್ಟ್

ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ವೈರಲ್ ವೀಡಿಯೋ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಘಟನೆಗಳನ್ನು ಪ್ರಸ್ತಾಪಿಸಿದ ವಕೀಲರಾದ ಬಾನ್ಸುರಿ ಸ್ವರಾಜ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದ ವೈರಲ್ ವೀಡಿಯೊ ಪ್ರಕರಣದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಕೋಮು ಮತ್ತು ಪಂಥೀಯ ಕಲಹಗಳಲ್ಲಿ ಮಹಿಳೆಯರ ವಿರುದ್ಧ … Continued

ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ ವಿಚಾರ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ತಿರುಪತಿ ಲಡ್ಡು ತಯಾರಿಕೆಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಚುನಾವಣೆಯಲ್ಲಿ ಕೆಎಂಎಫ್‌ ಬಗ್ಗೆ ಕಾಂಗ್ರೆಸ್ ರಾಜಕಾರಣ ಮಾಡಿತು. ಅಮುಲ್ ವಿಷಯ ಇಟ್ಟುಕೊಂಡು ರಾಜಕೀಯ ಮಾಡಿತು. ಈಗ ಕಾಂಗ್ರೆಸ್ ಸರ್ಕಾರ ಹಾಲಿನ ದರ … Continued

ಟೊಮೆಟೊ ಲಾರಿ ನಾಪತ್ತೆ ಪ್ರಕರಣ : ಗುಜರಾತಲ್ಲಿ ಲಾರಿ ಪತ್ತೆ, 21 ಲಕ್ಷ ರೂ. ಬೆಲೆಯ ಟೊಮೆಟೊ ಮಾರಾಟ ಮಾಡಿ ಚಾಲಕ ಪರಾರಿ

ಕೋಲಾರ: ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ತುಂಬಿಕೊಂಡು ರಾಜಸ್ಥಾನಕ್ಕೆ ಒಯ್ಯುವಾಗ ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಪತ್ತೆಯಾಗಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಲಾರಿ ಚಾಲಕ ಅನ್ವರ್​ ಲಾರಿಯಲ್ಲಿ ಅಳವಡಿಸಿದ್ದ … Continued