ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವೀಡಿಯೊ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ … Continued

ಚುನಾವಣಾ ಸಮಯದಲ್ಲಿ ಮತದಾರರಿಗೆ ಆಮಿಷದ ಪ್ರಕರಣ : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಿಂದ ನೋಟಿಸ್‌

ಬೆಂಗಳೂರು : ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಮಿಷದ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರನ್ನು ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅನರ್ಹಗೊಳಿಸಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ.ಶಂಕರ … Continued

ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಟ್ವೀಟ್‌ : ಬಿಜೆಪಿ ಕಾರ್ಯಕರ್ತೆಯ ಬಂಧನ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಕುಟುಂದವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಟ್ವೀಟ್‌ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದ ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಆಕ್ಷೇಪಾರ್ಹ ಪದಗಳನ್ನು … Continued

ಹಿಮಾಲಯದಲ್ಲಿ 60 ಕೋಟಿ ವರ್ಷಗಳಷ್ಟು ಹಳೆಯದಾದ ಸಾಗರವನ್ನು ಕಂಡುಹಿಡಿದ ಭಾರತ, ಜಪಾನ್ ವಿಜ್ಞಾನಿಗಳು…!

ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಮತ್ತು ಜಪಾನ್‌ನ ನಿಗಾಟಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಿಮಾಲಯದ ಎತ್ತರದಲ್ಲಿ ಸುಮಾರು 60 ಕೋಟಿ ವರ್ಷಗಳ ಹಿಂದೆ ಅಸ್ತಿತ್ವದಲ್ಲಿದ್ದ ಪ್ರಾಚೀನ ಸಾಗರದ ಉಳಿದಿರುವ ಖನಿಜ ನಿಕ್ಷೇಪಗಳಲ್ಲಿ ಸಿಕ್ಕಿಬಿದ್ದ ನೀರಿನ ಹನಿಗಳನ್ನು ಕಂಡುಹಿಡಿದಿದ್ದಾರೆ. ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಕಾರ್ಬೋನೇಟ್‌ಗಳನ್ನು ಹೊಂದಿರುವ ಈ ನಿಕ್ಷೇಪಗಳ ವಿಶ್ಲೇಷಣೆಯು ಭೂಮಿಯ ಇತಿಹಾಸದಲ್ಲಿ ಪ್ರಮುಖ ಆಮ್ಲಜನಕೀಕರಣದ … Continued

ನಾಸಿಕ್‌ : ಮನೆಗೆ ನುಗ್ಗಿ ನಾಯಿ ಮೇಲೆ ದಾಳಿ ಮಾಡಿದ ಚಿರತೆ ; ಪ್ರತಿದಾಳಿ ಮಾಡಿ ಚಿರತೆಯನ್ನೇ ಹೆದರಿಸಿ ಓಡಿಸಿದ ಎರಡು ನಾಯಿಗಳು | ವೀಕ್ಷಿಸಿ

ನಾಸಿಕ್: ನಾಸಿಕ್‌ನ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಚಿರತೆಯೊಂದು ನಾಯಿಯ ಮೇಲೆ ದಾಳಿ ಮಾಡಲು ಯತ್ನಿಸಿದೆ. ಆದರೆ ನಾಯಿಗಳೇ ಅದನ್ನು ಓಡಿಸಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯೊಂದರ ಹುಲ್ಲುಹಾಸಿನ ಪ್ರದೇಶಕ್ಕೆ ಚಿರತೆಯೊಂದು ನಿಧಾನವಾಗಿ ನುಗ್ಗಿ ಮನೆಯ ಮುಖ್ಯ ಬಾಗಿಲಿನ ಹೊರಗೆ ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಯತ್ನಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಆದರೆ, ಮತ್ತೊಂದು … Continued

ಸ್ಟಾರ್‌ ಚಿಹ್ನೆ ಹೊಂದಿರುವ ಬ್ಯಾಂಕ್‌ ನೋಟುಗಳು ಕಾನೂನುಬದ್ಧವಾಗಿವೆ, ಗೊಂದಲ ಬೇಡ: ಆರ್​ಬಿಐ ಸ್ಪಷ್ಟನೆ

ನವದೆಹಲಿ: ಸ್ಟಾರ್‌ (*) ಚಿಹ್ನೆ ಹೊಂದಿರುವ ಬ್ಯಾಂಕ್‌ ನೋಟುಗಳು ನಕಲಿ ಎನ್ನುವ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ನಡೆಯುತ್ತಿರುವ ಊಹಾಪೋಹಗಳ ಬಗ್ಗೆ ಆರ್‌ಬಿಐ ಈ ಸ್ಪಷ್ಟನೆ ನೀಡಿದ್ದು, ಸ್ಟಾರ್‌ (*) ಚಿಹ್ನೆ ಹೊಂದಿರುವ ನೋಟುಗಳು ಕಾನೂನುಬದ್ಧವಾಗಿದೆ ಎಂದು ಅದು ಸ್ಪಷ್ಟಪಡಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ 27 ರಂದು ನಕ್ಷತ್ರ (*) ಚಿಹ್ನೆಯನ್ನು ಹೊಂದಿರುವ ಬ್ಯಾಂಕ್‌ … Continued

ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ 13 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, … Continued

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವೀಡಿಯೊ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಸೂಚಿಸಿದ ಕೇಂದ್ರ -ವರದಿ

ನವದೆಹಲಿ : ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಮಣಿಪುರದ ಭಯಾನಕ ವೀಡಿಯೊ ಪ್ರಕರಣವನ್ನು ಕೇಂದ್ರೀಯ ತನಿಖಾ ದಳವು ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ಸಿಬಿಐಗೆ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ ಕಳೆದ ಮೂರು ತಿಂಗಳಿನಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರ … Continued

ಆಗಸ್ಟ್‌ 2ರಂದು ರಾಜ್ಯ ನಾಯಕರ ಜೊತೆ ಕಾಂಗ್ರೆಸ್‌ ಹೈಕಮಾಂಡ್‌ ಸಭೆ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಅಸಮಾಧಾನದ ಬೆನ್ನಲ್ಲೇ, ಹೈಕಮಾಂಡ್‌ ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಯೋಜಿಸಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯದ … Continued

ಶಾಸಕರ ಅಸಮಾಧಾನಕ್ಕೆ ಸಿದ್ದರಾಮಯ್ಯ ಮದ್ದು : ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ – ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಭರವಸೆ

ಬೆಂಗಳೂರು : ವರ್ಗಾವಣೆ ಹಾಗೂ ಅನುದಾನದ ವಿಚಾರದಲ್ಲಿ ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಆಡಳಿತಾತ್ಮಕ ಒತ್ತಡಗಳ ನಡುವೆಯೂ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಅಲ್ಲಿ ಚರ್ಚಿಸುತ್ತೇನೆ. … Continued