ಭಾರೀ ಮಳೆ : ಜುಲೈ 26 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು/ ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ ಸಹಿತ ಅಬ್ಬರದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದೆ, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಿಸಿ … Continued

ಮಳೆ : ಬೆಳಗಾವಿ ಜಿಲ್ಲೆ ಐದು ತಾಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ … Continued

ಮಹದಾಯಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ: ಗೋವಾ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಗೋವಾ ಪೀಠ ಆದೇಶ

ಪಣಜಿ : ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಸೋಮವಾರ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಅಧಿಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪಿನಲ್ಲಿ ಹೈಕೋರ್ಟ್, “ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿ … Continued

ಜುಲೈ 26ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ … Continued

ರಾಜ್ಯಾದ್ಯಂತ ಮಳೆ ಜೋರು; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರೀ ಮಳೆಯುವ ಸರಿಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ, … Continued

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಿದ ಆರೋಪ ; ‘ಇಂಡಿಯಾ’ ಮೈತ್ರಿ ಪಕ್ಷದ ಸದಸ್ಯರಿಂದ ಸಭಾತ್ಯಾಗ

ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಲಾಗಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆ ಖಂಡಿಸಿ ಇಂದು ಮಂಗಳವಾರ ಸಭಾತ್ಯಾಗ ಮಾಡಿದವು. ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ … Continued

ನನ್ನ ಹೆಸರಲ್ಲಿ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರ ಫೇಕ್ : ಶಾಸಕ ಬಿ.ಆರ್‌. ಪಾಟೀಲ ಸ್ಪಷ್ಟನೆ

ಬೆಂಗಳೂರು: ಶಾಸಕರ ಕುಂದುಕೊರತೆ ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ತಾವು ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿದ್ದಾರೆ ಎಂದು ಆಳಂದ ಶಾಸಕ ಬಿ.ಆರ್‌. ಪಾಟೀಲ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದೊಂದು ಫೇಕ್‌ ಲೆಟರ್‌ ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ … Continued

ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಪಾಕಿಸ್ತಾನಕ್ಕೆ ಹೋದ ಭಾರತದ ಮಹಿಳೆ ಅಂಜು ; ಇಸ್ಲಾಂಗೆ ಮತಾಂತರ: ವರದಿ

ನವದೆಹಲಿ: ಘಟನೆಯ ನಾಟಕೀಯ ಬೆಳವಣಿಗೆಯಲ್ಲಿ, ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಕಾನೂನುಬದ್ಧವಾಗಿ ಪ್ರಯಾಣಿಸಿದ ಭಾರತದ ಅಂಜು ಎಂಬ ಮಹಿಳೆ ಇಸ್ಲಾಂಗೆ ಮತಾಂತರಗೊಂಡು ತನ್ನ ಪಾಕಿಸ್ತಾನಿ ಪ್ರೇಮಿ ನಸ್ರುಲ್ಲಾ ಎಂಬವರನ್ನು ವಿವಾಹವಾಗಿದ್ದಾಳೆ ಎಂದು ವರದಿಯಾಗಿದೆ. ಮತಾಂತರದ ನಂತರ, ಅವಳು ಈಗ ಫಾತಿಮಾ ಆಗಿದ್ದಾಳೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನದ ಅಪ್ಪರ್ ದಿರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ … Continued

ಅನುದಾನ ಬಿಡುಗಡೆಗೂ ಹಣಕ್ಕೆ ಬೇಡಿಕೆ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ ಶಾಸಕ ಬರೆದ ಪತ್ರ ವೈರಲ್‌ | ಇದು ಫೇಕ್‌ ಲೆಟರ್‌, ನನ್ನದಲ್ಲ-ಶಾಸಕ ಬಿ.ಆರ್‌.ಪಾಟೀಲ ಸ್ಪಷ್ಟನೆ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಚನೆಯಾಗಿ ಎರಡು ತಿಂಗಳಷ್ಟೇ ಆಗಿದೆ. ಈಗಲೇ ಕಾಂಗ್ರೆಸ್‌ನ ಹಿರಿಯ ಶಾಸಕರು ತಮ್ಮದೇ ಪಕ್ಷದ ಸರ್ಕಾರದ ಸಚಿವರ ನಡೆ ಹಾಗೂ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ ಎಂಬ ವಿಷಯ ಈಗ ರಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್‌ ಶಾಸಕರೊಬ್ಬರು ಮುಖ್ಯಮಂತ್ರಿಗೆ ಬರೆದಿದ್ದಾರೆ ಎಂದು ಹೇಳಲಾದ … Continued

ಲೋಕಸಭೆ ಚುನಾವಣೆ : ಜೆಡಿಎಸ್-ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ ದೇವೇಗೌಡರು-ಅವರು ಹೇಳಿದ್ದೇನು..?

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯಾಗುವ ಸಾಧ್ಯತೆ ಕುರಿತು ಇದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆ ಎಂಬುದು ಗೊತ್ತಿಲ್ಲ. ಆದರೆ ಜೆಡಿಎಸ್‌ ಸ್ವತಂತ್ರವಾಗಿ … Continued