ಮಳೆಯಿಂದ ತತ್ತರಿಸಿರುವ ಗುಜರಾತಿನ ಜುನಾಗಢದಲ್ಲಿ ವಾಹನದಟ್ಟಣೆ ಇರುವ ರಸ್ತೆಯ ಮೇಲೆ ವಿಹರಿಸುತ್ತಿರುವ ಸಿಂಹ : ವೀಕ್ಷಿಸಿ

ಭಾರೀ ಮಳೆಯ ನಡುವೆ ಗುಜರಾತ್‌ನ ಜುನಾಗಢ್‌ನಲ್ಲಿರುವ ಫ್ಲೈಓವರ್‌ನಲ್ಲಿ ಸಿಂಹವೊಂದು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದೆ. ವಾಹನಗಳು ಹಾದುಹೋಗುವಾಗ ಸಿಂಹ ರಸ್ತೆಯಲ್ಲಿ ನಡೆದುಕೊಂಡು ಹೋಗುವುದನ್ನು ವೀಡಿಯೊ ತೋರಿಸುತ್ತದೆ. ಮಾಜಿ ಕ್ರಿಕೆಟಿಗ ಸಾಬಾ ಕರೀಂ ಅವರು ಟ್ವಿಟ್ಟರ್‌ನಲ್ಲಿ ಈ ವೀಡಿಯೊ ಪೋಸ್ಟ್ ಮಾಡಿದ್ದಾರೆ. ಸಿಂಹವೊಂದು ರಸ್ತೆಯಲ್ಲಿ ಶಾಂತವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಸಾಬಾ ಕರೀಂ … Continued

ಜುಲೈ 26ರ ವರೆಗೆ ಜ್ಞಾನವಾಪಿ ಮಸೀದಿಯ ಎಎಸ್‌ಐ ಸರ್ವೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಜುಲೈ 26ರವರೆಗೆ ಯಾವುದೇ ಸರ್ವೆ ನಡೆಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ ಹಾಗೂ ಪರಿಹಾರಕ್ಕಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವಂತೆ ಮುಸ್ಲಿಂ ಅರ್ಜಿದಾರರಿಗೆ ಸೂಚಿಸಿದೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯದ ಎಎಸ್‌ಐ ಆದೇಶವನ್ನು ಪ್ರಶ್ನಿಸಲು ಜ್ಞಾನವಾಪಿ ಮಸೀದಿ ಆಡಳಿತ … Continued

ಸೀಮಾ ಹೈದರ್ ಗುರುತಿನ ಪರಿಶೀಲನೆಗಾಗಿ ಎಲ್ಲ ದಾಖಲೆಗಳನ್ನು ಪಾಕಿಸ್ತಾನ ರಾಯಭಾರ ಕಚೇರಿಗೆ ಕಳುಹಿಸಿದ ಪೊಲೀಸರು

ನವದೆಹಲಿ: ತನ್ನ ಭಾರತೀಯ ಪ್ರೇಮಿಯೊಂದಿಗೆ ವಾಸಿಸಲು ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಗುರುತಿನ ಪರಿಶೀಲನೆಗಾಗಿ ಆಕೆಯಿಂದ ವಶಪಡಿಸಿಕೊಂಡ ಎಲ್ಲಾ ದಾಖಲೆಗಳನ್ನು ನೋಯ್ಡಾ ಪೊಲೀಸರು ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಕಳುಹಿಸಿದ್ದಾರೆ. ಮೇ ತಿಂಗಳಲ್ಲಿ ತನ್ನ ಪ್ರೇಮಿ ಸಚಿನ್ ಮೀನಾ ಜೊತೆ ವಾಸಿಸಲು ತನ್ನ ನಾಲ್ಕು ಮಕ್ಕಳೊಂದಿಗೆ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ … Continued

ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಎಎಸ್‌ಐ ಸರ್ವೆ ಆರಂಭ

ವಾರಾಣಸಿ : ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ 30 ಸದಸ್ಯರ ತಂಡ ಇಂದು ಸೋಮವಾರ (ಜುಲೈ ೨೪) ಸಮೀಕ್ಷೆ ಆರಂಭಿಸಿದೆ. ಮಸೀದಿಯನ್ನು ಪ್ರಾಚೀನ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಮಸೀದಿ ವ್ಯವಸ್ಥಾಪನಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. … Continued

ಈಗ ಫೇಸ್‌ಬುಕ್ ಸ್ನೇಹಿತನನ್ನು ಭೇಟಿಯಾಗಲು ‘ಸೀಮೆ’ ದಾಟಿ ಪಾಕಿಸ್ತಾನಕ್ಕೆ ಹೋದ ಭಾರತೀಯ ಮಹಿಳೆ

ನವದೆಹಲಿ: ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಪಬ್‌ ಜಿ ಪ್ರೇಮಿಗಾಗಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿರುವುದು ಈಗ ದೇಶಾದ್ಯಂತ ಸುದ್ದಿಯಾಗಿರುವಾಗಲೇ ಇದೀಗ ಭಾರತೀಯ ಮಹಿಳೆಯೊಬ್ಬರು ತನ್ನ ಪ್ರೇಮಿಯನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಹೋದ ಸುದ್ದಿ ಈಗ ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ ಸ್ನೇಹಿತ(ಪ್ರೇಮಿ..?)ನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ … Continued

ರಾಜ್ಯ ಮಟ್ಟದ ಪ್ರಶಸ್ತಿಗೆ ಹೆಸರು ಆಹ್ವಾನ

ಹುಬ್ಬಳ್ಳಿ : ಹಿರಿಯ ಸಾಹಿತಿ ಡಾ.ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ಮೂಲಕ ರಾಜ್ಯಮಟ್ಟದ “ಸಂಗಮ ಸಿರಿ” ಪ್ರಶಸ್ತಿಗೆ ಹೆಸರು ಆಹ್ವಾನಿಸಲಾದೆ. ಇದು ಪ್ರಶಸ್ತಿ ಜೊತೆಗೆ 10 ಸಾವಿರ ರೂ.ಹಾಗೂ ಫಲಕವನ್ನು ನೀಡಿ ಗೌರವಿಸಲಾಗುತ್ತದೆ. ವಚನ ಸಾಹಿತ್ಯ ಕ್ಷೇತ್ರದಲ್ಲಿ ವಚನಗಳ ರಚನೆ ಮಾಡಿದವರಿಗೆ ಈ ವರ್ಷದ ಪ್ರಶಸ್ತಿ ನೀಡಲಾಗುತ್ತದೆ. ವಚನ ರಚನೆಕಾರರು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ: ಮುನ್ಸೂಚನೆ

ಬೆಂಗಳೂರು: ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜುಲೈ 24ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗಲಿದ್ದು ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಹಾಗೂ ಜುಲೈ 25ರಿಂದ … Continued

ಭಾರೀ ಮಳೆ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ ನಂತರ ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 24) ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಧಾರವಾಡ, ಕೊಡಗು ಸೇರಿದಂತೆ ಎಂಟು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ … Continued

ಇಂದು ಧಾರವಾಡ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭಾನುವಾರ ಸಂಜೆ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ … Continued

ಭಾರೀ ಮಳೆ : ಇಂದು ಉತ್ತರ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 24ರಂದು  ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. … Continued