ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಇಂಫಾಲ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಹೇಯ ಕೃತ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಯುಮ್ಲೆಂಬಮ್ ನುಂಗ್ಸಿತೋಯ್ ಮೈತೆ (19) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಐವರನ್ನು ಬಂಧಿಸಿದ್ದು, ವೈರಲ್ ವೀಡಿಯೊದಲ್ಲಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೂ ಇನ್ನೂ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continued

ಮಹಿಳೆಯರ ಸುರಕ್ಷತೆಯ ಬಗ್ಗೆ ತಮ್ಮದೇ ಸರ್ಕಾರ ಪ್ರಶ್ನಿಸಿದ ರಾಜಸ್ಥಾನ ಸಚಿವರನ್ನು ವಜಾ ಮಾಡಿದ ಸಿಎಂ ಅಶೋಕ ಗೆಹ್ಲೋಟ್‌

ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ ಕೆಲವೇ ಗಂಟೆಗಳ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ರಾಜೇಂದ್ರ ಗುಧಾ ಅವರನ್ನು ರಾಜ್ಯ ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ. ರಾಜೇಂದ್ರ ಗುಧಾ ಅವರು ಸೈನಿಕ ಕಲ್ಯಾಣ (ಸ್ವತಂತ್ರ ಉಸ್ತುವಾರಿ), ಗೃಹರಕ್ಷಕ ಮತ್ತು ನಾಗರಿಕ ರಕ್ಷಣೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾಗಿದ್ದರು. ಅಧಿಕಾರ … Continued

ಕಾರು-ಟಿಪ್ಪರ್ ಲಾರಿ ಡಿಕ್ಕಿ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಹಾಸನ : ಟಿಪ್ಪರ್ ವಾಹನ ಡಿಕ್ಕಿಯಾಗಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ ದುರ್ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕುಪ್ಪಳ್ಳಿ ಗ್ರಾಮದ ಚೇತನ, ಗುಡ್ಡೇನಹಳ್ಳಿ ಗ್ರಾಮದ ಅಶೋಕ, ತಟ್ಟೆಕೆರೆ ಗ್ರಾಮದ ಪುರುಷೋತ್ತಮ … Continued

ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧ

ಬೆಂಗಳೂರು : ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅಲ್ಲದೇ, 61 ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ಶೀನಪ್ಪ, ಇತರರು ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 11ನೇ ಹೆಚ್ಚುವರಿ … Continued

ಈಗ ನಂದಿನಿ ಹಾಲಿನ ದರ ಹೆಚ್ಚಳದ ಶಾಕ್‌ ; ಆಗಸ್ಟ್‌ 1ರಿಂದ ಪರಿಷ್ಕೃತ ದರ ದರ ಜಾರಿ

ಬೆಂಗಳೂರು: ಕೆಂಎಫ್‌ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. … Continued

ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟಿಗೆ ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) … Continued

ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು

(ಜುಲೈ ೨೨ ರಂದು ಪೂಜ್ಯರ ೬೦ನೇ ಜನ್ಮದಿನ, ಆ ನಿಮಿತ್ತ ಲೇಖನ) ಕಾಯಕಯೋಗಿ, ನಡೆದಾಡುವ ದೇವರೆಂದೇ ಖ್ಯಾತಿಗಳಿಸಿದ್ದ ಸಿದ್ಧಗಂಗಾ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳು ತಮ್ಮ ಉತ್ತರಾಧಿಕಾರಿಯನ್ನಾಗಿ ಶ್ರೀ ಸಿದ್ಧಲಿಂಗ ಸ್ವಾಮಿಗಳನ್ನು ೧೯೮೮ ಮಾರ್ಚ ೩ ರಂದು ನೇಮಕ ಮಾಡಿದ್ದರು. ಶೈಕ್ಷಣಿಕವಾಗಿ, ಅಧ್ಯಾತ್ಮಿಕವಾಗಿ ಮತ್ತು ಸಾಮಾಜಿಕವಾಗಿ ಅನುಪಮ ಸೇವೆ ಸಲ್ಲಿಸುತ್ತ ಬಂದಿರುವ ಸಿದ್ಧಗಂಗಾ ಕ್ಷೇತ್ರದ … Continued

‘ಶಿವಲಿಂಗ’ ರಚನೆ ಹೊರತುಪಡಿಸಿ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ ವಾರಾಣಸಿ ನ್ಯಾಯಾಲಯ

ವಾರಾಣಸಿ : ವಾರಾಣಸಿ ನ್ಯಾಯಾಲಯವು ಶುಕ್ರವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯಿಂದ ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಆದೇಶಿಸಿದೆ ಎಂದು ಸರ್ಕಾರಿ ವಕೀಲ ರಾಜೇಶ ಮಿಶ್ರಾ ತಿಳಿಸಿದ್ದಾರೆ. ಹಿಂದೂ ದಾವೆದಾರರು ‘ಶಿವಲಿಂಗ’ ಎಂದು ಹೇಳಿಕೊಳ್ಳುವ ರಚನೆಯು ಈ ಸಮೀಕ್ಷೆಯ ಭಾಗವಾಗಿರುವುದಿಲ್ಲ. ಹಿಂದೂ ದೇವಾಲಯದ ಸ್ಥಳದಲ್ಲಿ ಮಸೀದಿಯನ್ನು … Continued

ಕುಮಟಾ: ಜುಲೈ 23ರಂದು ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ

ಕುಮಟಾ: ಇಲ್ಲಿನ ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ ಜುಲೈ 23, ಭಾನುವಾರ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿವಿಧ ಕಲಾವಿದರು ಹಾಗೂ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ವೈದ್ಯ ಡಾ.ಅನಿಲ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಅರೇಅಂಗಡಿಯ ಎಸ್‌.ಕೆ.ಪಿ.ಸಂಯುಕ್ತ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ … Continued